ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಕುರಿತಾಗಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಸತತ 5ನೇ ದಿನವೂ ವಿಚಾರಣೆ ಮುಂದೂಡಿದೆ.
ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ಹೈಕೋರ್ಟ್ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದ್ದು, ಇಂದು ಹಿಜಾಬ್ ಕುರಿತ ಎರಡು ಪಿಐಎಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ ಎರಡೂ ಅರ್ಜಿಗಳನ್ನು ವಜಾಗೊಳಿಸಿದೆ.
ಇದೇ ವೇಳೆ ಸರ್ಕಾರದ ಪರ ವಕೀಲ ಎಜಿ ಪ್ರಭುಲಿಂಗ ನಾವದಗಿ ತಮಗೆ ಪ್ರತಿವಾದ ಮಂಡನೆಗೆ ಕೆಲ ಸಮಯಾವಕಾಶ ನೀಡುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಅಲ್ಲದೇ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಪರ ವಾದ ಮಂಡಿಸುತ್ತಿರುವ ಸಜ್ಜನ್ ಪೂವಯ್ಯ ತಾವು ಎಜಿ ಪ್ರಭುಲಿಂಗ ಪ್ರತಿವಾದ ಮಂದನೆ ಬಳಿಕ ವಾದ ಮಂಡಿಸುವುದಾಗಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿಜಾಬ್ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪಿಠ ನಾಳೆ ಮಧ್ಯಾಹ್ನ 2:30ಕ್ಕೆ ನಿಗದಿಗೊಳಿಸಿ ವಿಚಾರಣೆ ಮುಂದೂಡಿದೆ.
ಬೆಳಗಾವಿ ಕಾಲೇಜಿನಲ್ಲಿ ಹಿಜಾಬ್ ವಿವಾದ; 6 ಯುವಕರು ವಶಕ್ಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ