ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ಮುಂದೂಡಿದೆ.
ಹಿಜಾಬ್ ಅರ್ಜಿ ವಿಚಾರಣೆ ಸಿಜೆ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್, ನ್ಯಾ.ಖಾಜಿ ಜೈಬುನ್ನೀಸಾ ಮೊಹಿಯುದ್ದೀನ್ ನೇತೃತ್ವದ ತ್ರಿಸದಸ್ಯ ಪೀಠದಲ್ಲಿ ನಡೆಯುತ್ತಿದ್ದು, ಈಗಾಗಲೇ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿದ್ದಾರೆ. ಇಂದು ಎಜಿ ಪ್ರಭುಲಿಂಗ ನಾವದಗಿ ಸರ್ಕಾರದ ಪರ ಪ್ರತಿವಾದ ಮಂಡಿಸಿದ್ದಾರೆ.
ಯಾವುದೇ ಕಾಲೇಜಿನಲ್ಲಿ ಸರ್ಕಾರದ ಸಮವಸ್ತ್ರ ನೀತಿಯಿಂದ ಸಮಸ್ಯೆಯಾಗಿಲ್ಲ, ಶಿಸ್ತಿಗೆ ಪೂರಕವಾದ ಸಮವಸ್ತ್ರ ಸೂಚಿಸಲಾಗಿದೆ. ಸರ್ಕಾರದ ಆದೇಶವನ್ನು ಅನಗತ್ಯವಾಗಿ ದೊಡ್ಡದು ಮಾಡಲಾಗಿದೆ. ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆಯಲ್ಲ, ಹಿಜಾಬ್ ನಿರ್ಬಂಧ ಅಭಿವ್ಯಕ್ತಿ ಸ್ವಾತಂತ್ರ್ಯ ಉಲ್ಲಂಘನೆ ಆಗುವುದಿಲ್ಲ ಎಂಬುದು ಸರ್ಕಾರದ ನಿಲುವು ಎಂಬಿತ್ಯಾದಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಿ ಪ್ರತಿವಾದ ಮಂಡಿಸಿದ್ದಾರೆ. ಎಜಿ ಅವರ ವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ ಸರ್ಕಾರದ ಮೂಲ ಉದ್ದೇಶ ಸೇರಿದಂತೆ ಹಲವು ಪ್ರಶ್ನೆಗಳನ್ನು ಕೇಳಿದೆ. ಬಳಿಕ ಹಿಜಾಬ್ ಕುರಿತ ಅರ್ಜಿ ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿ ಆದೇಶ ಹೊರಡಿಸಿದೆ.
ನಳಿನ್ ಕುಮಾರ್ ಕಟೀಲ್ ರಿಂದ ನನಗೆ ಜೀವ ಬೆದರಿಕೆ ಕರೆ; ಬಿ.ಕೆ.ಹರಿಪ್ರಸಾದ್ ಗಂಭೀರ ಆರೋಪ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ