ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ವಿವಾದ ಕುರಿತ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ತ್ರಿಸದಸ್ಯ ಪೀಠ ಮತ್ತೆ ಮುಂದೂಡಿ ಆದೇಶ ಹೊರಡಿಸಿದೆ.
ಅರ್ಜಿದಾರರ ಪರ ಹಿರಿಯ ವಕೀಲ ದೇವದತ್ ಕಾಮತ್ ಅವರ ವಾದ ಆಲಿಸಿದ ಹೈಕೋರ್ಟ್ ತ್ರಿಸದಸ್ಯ ಪೀಠ, ಅರ್ಜಿ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ಸಮವಸ್ತ್ರ ಕಡ್ಡಾಯ ಆದೇಶ ವಿವೇಚನಾ ರಹಿತವಾದದ್ದು, ಸಂವಿಧಾನದ ಆರ್ಟಿಕಲ್ 25ರ ನಿಯಮವನ್ನು ಆದೇಶದಲ್ಲಿ ಸರ್ಕಾರ ತಪ್ಪಾಗಿ ಗ್ರಹಿಸಿದೆ ಎಂಬುದನ್ನು ಅರ್ಜಿದಾರರ ಪರ ವಕೀಲ ದೇವದತ್ ಕಾಮತ್ ವಾದಿಸಿದ್ದಾರೆ. ಸತತ ಎರಡು ಗಂಟೆಗಳ ಕಾಲ ವಾದ ಆಲಿಸಿದ ಹೈಕೋರ್ಟ್ ಪೀಠ ವಿಚಾರಣೆಯನ್ನು ನಾಳೆಗೆ ಮುಂದೂಡಿ ಆದೇಶ ಹೊರಡಿಸಿದೆ.
ರೇಪ್ ಮಾತಿಗೆ ಉಲ್ಟಾ ಹೊಡೆದ ಶಾಸಕ; ಸೇಫ್ಟಿಗಾಗಿ ಹೆಲ್ಮೆಟ್ ಹಾಕುತ್ತೇವೆ, ಹಾಗೇ ಹಿಜಾಬ್ ಎಂದ ಜಮೀರ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ