ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ಪ್ರಕಟಿಸಲಿರುವ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ರೀತಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಶಾಲಾ-ಕಾಲೇಜುಗಳಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡಬೇಕು. ಸಣ್ಣಪುಟ್ಟ ಗಲಾಟೆಗೂ ಅವಕಾಶವಿಲ್ಲ. ಈಗಾಗಲೇ ಎಲ್ಲಾ ಜಿಲ್ಲೆಗಳ ಎಸ್ಪಿ ಗಳಿಗೂ ಕಟ್ಟೆಚ್ಚರಕ್ಕೆ ಸೂಚಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿದೆ. ಡಿಸಿಗಳಿಗೆ ಶಾಲಾ-ಕಾಲೇಜುಗಳಿಗೆ ರಜೆ ನೀದುವ ಅಧಿಕಾರ ನೀಡಲಾಗಿದೆ ಎಂದರು.
ರಾಜ್ಯದ ಜನರು ಶಾಂತಿಪ್ರಿಯರು. ಹಾಗಾಗಿ ಅಹಿತಕರ ಘಟನೆ ನಡೆಯಲ್ಲ ಎಂಬ ವಿಶ್ವಾಸವಿದೆ. ಕೋರ್ಟ್ ನೀಡುವ ತೀರ್ಪನ್ನು ಎಲ್ಲರೂ ಪಾಲಿಸಬೇಕು. ತೀರ್ಪಿಗೆ ವಿರುದ್ಧವಾಗಿ ನಡೆದುಕೊಂಡರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ಹಿಜಾಬ್ ತೀರ್ಪು; ರಾಜ್ಯಾದ್ಯಂತ ಹೈ ಅಲರ್ಟ್; ಕೆಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ