Film & EntertainmentKannada NewsKarnataka NewsNational
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ದೂರು ದಾಖಲಿಸಿದ ಬಾಲಿವುಡ್ ಖ್ಯಾತ ಗಾಯಕ

ಪ್ರಗತಿವಾಹಿನಿ ಸುದ್ದಿ: ತಮಗೆ ಸಂಬಂಧಿಸಿದ ಭೂಮಿಯನ್ನು ಕಬಳಿಸಿದ್ದಾರೆಂದು ಆರೋಪಿಸಿರುವ ಬಾಲಿವುಡ್ ಖ್ಯಾತ ಗಾಯಕ ಲಕ್ಕಿ ಅಲಿ ಅವರು, ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ಸುಧೀರ್ ರೆಡ್ಡಿ, ಬಾಮೈದ ಮಧುಸೂಧನ್ ರೆಡ್ಡಿ ವಿರುದ್ಧ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.
ಯಲಹಂಕ ನ್ಯೂಟೌನ್ ವ್ಯಾಪ್ತಿಗೆ ಬರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ರೋಹಿಣಿ ಸಿಂಧೂರಿ ಹಾಗೂ ಮಧುಸೂಧನ್ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರಿನ ಪ್ರತಿಯನ್ನು ತಮ್ಮ ಖಾತೆಯಲ್ಲಿ ಅವರು ಪೋಸ್ಟ್ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ 2022ರಲ್ಲಿಯೂ ಲಕ್ಕಿ ಅಲಿ ದೂರು ಸಲ್ಲಿಸಿದ್ದರು. ಯಲಹಂಕ ನ್ಯೂ ಟೌನ್ ಠಾಣೆಯ ACP ಮಂಜುನಾಥ್, ತಾಲೂಕು ಸರ್ವೇ ಅಧಿಕಾರಿ ಮನೋಹನ್ ಎಂಬುವವರೂ ಈ ಹಗರಣದಲ್ಲಿ ಭಾಗಿಯಾಗಿದ್ದಾರೆಂದು ಅಲಿ ಆಪಾದನೆ ಮಾಡಿದ್ದಾರೆ.
ಈ ಮೂಲಕ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಮತ್ತೊಂದು ವಿವಾದಕ್ಕೆ ಸಿಲುಕಿಕೊಂಡಿದ್ದಾರೆ.