ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಕೆಲ ದಿನಗಳಿಂದ ತಣ್ಣಗಾಗಿದ್ದ ಹಿಜಾಬ್ ವಿವಾದ ಇದೀಗ ಮತ್ತೆ ಆರಂಭವಾಗಿದ್ದು, ಮಂಗಳೂರಿನ ಹಂಪನಕಟ್ಟೆ ಕಾಲೇಜಿನಲ್ಲಿ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದು ಕಾಲೇಜಿನಲ್ಲಿ ಅವಾಂತರ ಸೃಷ್ಟಿಸಿದ್ದಾರೆ.
ಹಿಜಾಬ್ ಗೆ ಅವಕಾಶವಿಲ್ಲ ಎಂದು ಕಾಲೇಜು ಆದಳಿತ ಮಂಡಳಿ ಆದೇಶ ಹೊರಡಿಸಿದ್ದರೂ ಹಿಜಾಬ್ ಧರಿಸಿ ಬಂದ 12ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ತಮಗೆ ತರಗತಿಗಳಿಗೆ ಪ್ರವೇಶ್ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಆದರೆ ಕಾಲೇಜು ಪ್ರಾಂಶುಪಾಲೆ ಅನಸೂಯ ರೈ ಹಿಜಾಬ್ ಧರಿಸಿ ತರಗತಿಗೆ ಹೋಗುವಂತಿಲ್ಲ ಎಂದು ತಾಕೀತು ಮಾಡಿದ್ದಾರೆ.
ಕೋರ್ಟ್ ಆದೇಶ ಪಾಲನೆ ಮಾಡುವಂತೆ ಬುದ್ಧಿ ಹೇಳಿದ್ದಾರೆ. ಆದರೆ ಪಟ್ಟು ಬಿಡದ ವಿದ್ಯಾರ್ಥಿನಿಯರು ಗ್ರಂಥಾಲಯಕ್ಕೆ ಹೋಗಿ ಕುಳಿತಿದ್ದಾರೆ. ವಿವಾದ ತೀವ್ರಗೊಳ್ಳುತ್ತಿದ್ದಂತೆ ಕಾಲೇಜಿಗೆ ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ. ಹಿಜಾಬ್ ಧರಿಸಿ ಕಾಲೇಜಿಗೆ ಹಾಗೂ ತರಗತಿಗಳಿಗೆ ತೆರಳಲು ನಮಗೆ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ವಿದ್ಯಾರ್ಥಿನಿಯರು ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರಾಂಶುಪಾಲರೊಂದಿಗೆ ಸಭೆ ನಡೆಸಿ ಪರಿಶೀಲನೆ ನಡೆಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೆಲಕಾಲ ಕಾಲೇಜುಬಳಿ ಕಾದ ವಿದ್ಯಾರ್ಥಿನಿಯರು ಬಳಿಕ ಮನೆಗೆ ವಾಪಸ್ ಆಗಿದ್ದಾರೆ. ಇನ್ನೊದೆಡೆ ಕಾಲೇಜು ಆಡಳಿತ ಮಂಡಳಿ ಜತೆ ಜಿಲ್ಲಾಧಿಕಾರಿ ಸಭೆ ನಡೆಸಿದ್ದಾರೆ.
ಪಿಎಸ್ ಐ ಅಕ್ರಮ; ಎಸ್ಕೇಪ್ ಆಗಿದ್ದ ಶಾಂತಾಬಾಯಿ ಅರೆಸ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ