Latest

ಹಿಜಾಬ್ ಸಂಘರ್ಷ; ಪರೀಕ್ಷೆ ವಂಚಿತರಿಗೆ ಮರುಪರೀಕ್ಷೆ ವಿಚಾರ; ಸಚಿವರ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ವಿವಾದದ ವೇಳೆ ಹಲವು ಮುಸ್ಲೀಂ ವಿದ್ಯಾರ್ಥಿಗಳು ಪರೀಕ್ಷೆಯನ್ನೇ ಧಿಕ್ಕರಿಸಿದ್ದರೆ, ಇನ್ನು ಹಲವು ವಿದ್ಯಾರ್ಥಿಗಳು ಪರೀಕ್ಷೆಯಿಂದಲೇ ವಂಚಿತರಾಗಿದ್ದರು. ಈ ವಿಚಾರ ಇಂದು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದೆ.

ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಶಾಸಕ ರಘುಪತಿ ಭಟ್, ಹಿಜಾಬ್ ವಿವಾದ ಸಂದರ್ಭದಲ್ಲಿ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶಕೊಡಬೇಕು ಎಂದು ಹೇಳಿದರು. ಅಲ್ಲದೇ ಹಿಜಾಬ್ ಕುರಿತು ಹೈಕೋರ್ಟ್ ತೀರ್ಪು ನೀಡಿದ ಬಳಿಕವೂ ಕೆಲ ಕಾಲೇಜುಗಳಲ್ಲಿ ವಿವಾದ ಮುಂದುವರೆದಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಶಾಸಕ ರಘುಪತಿ ಭಟ್ ಹೇಳಿಕೆಗೆ ಮಾಜಿ ಸಚಿವ ಜಗದೀಶ್ ಶೆಟ್ಟರ್ ಕೂಡ ಧ್ವನಿಗೂಡಿಸಿದ್ದು, ಕೋರ್ಟ್ ಆದೇಶ ಉಲ್ಲಂಘನೆ ಸರಿಯಲ್ಲ, ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಜೆ.ಮಾಧುಸ್ವಾಮಿ, ಹಿಜಾಬ್ ವಿವಾದದಲ್ಲಿ ಪರೀಕ್ಷೆ ತಪ್ಪಿಸಿಕೊಂಡರೆ ಮರು ಪರೀಕ್ಷೆಗೆ ಅವಕಾಶ ಕೊಡಲು ಸಾಧ್ಯವಿಲ್ಲ. ಕೋರ್ಟ್ ಮಧ್ಯಂತರ ಆದೇಶ ನೀಡಿದ ಬಳಿಕ ಪರೀಕ್ಷೆ ತಪ್ಪಿಸಿಕೊಂಡಿದ್ದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ನಾವು ಒಂದು ವ್ಯವಸ್ಥೆಯಲ್ಲಿದ್ದೇವೆ. ಈಗ ಅವರಿಗೆ ಪರೀಕ್ಷೆಗೆ ಅವಕಾಶ ನೀಡಿದರೆ ಅದು ಬೇರೆ ಆಗುತ್ತದೆ. ಮಧ್ಯಂತರ ಆದೇಶಕ್ಕಿಂತ ಮೊದಲೇ ಪರೀಕ್ಷೆ ಬರೆಯದವರಿಗೆ ಮರು ಪರೀಕ್ಷೆಗೆ ಅವಕಾಶ ನೀಡುವ ಬಗ್ಗೆ ಸಿಎಂ ಜತೆ ಚರ್ಚಿಸುತೇನೆ ಎಂದು ಸ್ಪಷ್ಟಪಡಿಸಿದರು.

ಪುನೀತ್ ರಾಜ್ ಕುಮಾರ್ ಗೆ ಶೀಘ್ರದಲ್ಲಿಯೇ ‘ಕರ್ನಾಟಕ ರತ್ನ’ ಪ್ರದಾನ; ಸಿಎಂ ಘೋಷಣೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button