Latest

ಹಿಜಾಬ್ ಧರಿಸಿ ಬಂದ್ರೆ SSLC ಪರೀಕ್ಷೆಗಿಲ್ಲ ಅವಕಾಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ವಿದ್ಯಾರ್ಥಿಗಳು ಕಡ್ಡಾಯವಾಗಿ ಸಮವಸ್ತ್ರ ಧರಿಸಿ ಬರಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಹಿಜಾಬ್ ವಿಚಾರವಾಗಿ ಹೈಕೋರ್ಟ್ ನೀಡಿರುವ ತೀರ್ಪು ಎಲ್ಲರೂ ಪಾಲಿಸಬೇಕು. ಮಾರ್ಚ್ 28ರಿಂದ ಏ.11ರವರೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಯಲಿದ್ದು, ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶವಿಲ್ಲ.

ಸರ್ಕಾರಿ ಶಾಲೆಗಳಲ್ಲಿ ಶಾಲಾ ಸಮವಸ್ತ್ರ ಕಡ್ಡಾಯವಾಗಿದ್ದು, ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿ ನಿರ್ಧರಿಸಿರುವ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಹಿಜಾಬ್ ಕಾರಣಕ್ಕೆ ಪರೀಕ್ಷೆಗೆ ಗೈರಾದರೆ ಮರು ಪರೀಕ್ಷೆಗೆ ಅವಕಾಶವಿಲ್ಲ ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಕೊಂಡೋತ್ಸವದಲ್ಲಿ ಅವಘಡ; ಕೆಂಡದ ಮೇಲೆ ಬಿದ್ದ ಅರ್ಚಕ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button