Latest

ರೇಪ್ ಮಾತಿಗೆ ಉಲ್ಟಾ ಹೊಡೆದ ಶಾಸಕ; ಸೇಫ್ಟಿಗಾಗಿ ಹೆಲ್ಮೆಟ್ ಹಾಕುತ್ತೇವೆ, ಹಾಗೇ ಹಿಜಾಬ್ ಎಂದ ಜಮೀರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ್ದ ಶಾಸಕ ಜಮೀರ್ ಅಹ್ಮದ್, ಹಿಜಾಬ್ ಅವರ ಹಕ್ಕು, ಹಿಜಾಬ್ ಧರಿಸದಿದ್ದರೆ ರೇಪ್ ಆಗುತ್ತೆ ಎಂದು ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆ ವಿವಾದಕ್ಕೀಡಾಗುತ್ತಿದ್ದಂತೆ ಉಲ್ಟಾ ಹೊಡೆದ ಶಾಸಕರು, ನಾನು ಹಾಗೆ ಹೇಳಿಯೇ ಇಲ್ಲ ಎಂದಿದ್ದಾರೆ.

ದೇಶದಲ್ಲಿ ಅತ್ಯಾಚಾರ ಪ್ರಕರಣದ ರೇಟ್ ಹೆಚ್ಚಿದೆ. ಹಿಜಾಬ್ ಹಾಕಿದರೆ ರೇಪ್ ಆಗಲ್ಲ. ಹಿಜಾಬ್ ಹಾಕದಿದ್ದರೆ ಅತ್ಯಾಚಾರವಾಗುತ್ತದೆ ಎಂದು ಹೇಳಿದ್ದರು. ಶಾಸಕರ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಶಾಸಕರು, ನಾನು ಹೇಳಿದ್ದನ್ನು ತಪ್ಪಾಗಿ ಅರ್ಥೈಸಲಾಗಿದೆ. ಹಿಜಾಬ್ ಧರಿಸಿದರೆ ಅವರಿಗೆ ಸೇಫ್ಟಿ ಇರುತ್ತೆ ಎಂಬ ಅರ್ಥದಲ್ಲಿ ಹೇಳಿದ್ದೇನೆ ಅಷ್ಟೇ ಎಂದಿದ್ದಾರೆ.

ಹಿಜಾಬ್ ಧರಿಸಿದರೆ ರೇಪ್ ಕಡಿಮೆಯಾಗುತ್ತೆ ಎಂದಿಲ್ಲ, ಅವರ ಬ್ಯೂಟಿ ಕಾಣಲ್ಲ, ಸೇಫ್ಟಿ ಇರುತ್ತೆ ಎಂಬರ್ಥದಲ್ಲಿ ಹೇಳಿದ್ದೇನೆ. ಈಗ ಸೇಫ್ಟಿಗಾಗಿ ಹೆಲ್ಮೆಟ್ ಹಾಕುತ್ತೇವೆ, ಹಾಗೇ ಹಿಜಾಬ್ ಧರಿಸಿದರೆ ಏನು ಸಮಸ್ಯೆ ಎಂದು ಪ್ರಶ್ನಿಸಿದ್ದಾರೆ.
ಹಿಜಾಬ್ ಧರಿಸಿ ಅಧಿವೇಶನಕ್ಕೆ ಬಂದ ಶಾಸಕಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button