Belagavi NewsBelgaum NewsKannada NewsKarnataka NewsLatest

*ಬೈಲಹೊಂಗಲದ ಮಾಜಿ ಶಾಸಕನ ಪುತ್ರನ ಶವ ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಅರಣ್ಯ ಪ್ರದೇಶದಲ್ಲಿ ನಿಂತಿದ್ದ ಕಾರಿನಲ್ಲಿ ಮಾಜಿ ಶಾಸಕರೊಬ್ಬರ ಪುತ್ರನ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.

Home add -Advt

ಧಾರವಾಡ ಜಿಲ್ಲೆಯ ರಾಮಾಪುರ ಬಳಿಯ ಅರಣ್ಯ ಪ್ರದೇಶದಲ್ಲಿ ಕಾರೊಂದು ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರಿನೊಳಗೆ ವ್ಯಕ್ತಿಯೊಬ್ಬರ ಶವ ಕೂಡ ಸುಟ್ಟುಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಮೃತದೇಹ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರದ್ದು ಎಂದು ತಿಳಿದುಬಂದಿದೆ.

ಘಟನೆ ಬಗ್ಗೆ ಸಾಕಷ್ಟು ಅನುಮಾನ ವ್ಯಕ್ತವಾಗಿದ್ದು, ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button