Latest

ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ, ಸಮವಸ್ತ್ರ ಕಡ್ಡಾಯಕ್ಕೆ ವಿರೋಧ ಸಲ್ಲ, ಸರಕಾರದ ಆದೇಶ ಪಾಲಿಸಲೇ ಬೇಕು- ಹೈಕೋರ್ಟ್ ತೀರ್ಪು; ಸರಕಾರದ ಆದೇಶ ಎತ್ತಿ ಹಿಡಿದ ಕೋರ್ಟ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು –

ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ, ಸಮವಸ್ತ್ರ ಕಡ್ಡಾಯಕ್ಕೆ ವಿರೋಧ ಸಲ್ಲ, ಸರಕಾರದ ಆದೇಶ ಪಾಲಿಸಲೇ ಬೇಕು ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.

ಸರಕಾರದ ಆದೇಶ ವನ್ನು ಹೈ ಕೋರ್ಟ್ ಎತ್ತಿ ಹಿಡಿದಿದೆ.

ಮಂಗಳವಾರ ಹೈಕೋರ್ಟ್ ಈ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ತೀರ್ಪನ್ನು ಓದಿದರು.

ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸುವ ಸಂಬಂಧ ವಿವಾದದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೂವರು ನ್ಯಾಯಾಧೀಶರ ಪೀಠವನ್ನು ಸ್ಥಾಪಿಸಿ ವಿಚಾರಣೆ ನಡೆಸಿತ್ತು.

ರಾಜ್ಯಾದ್ಯಂತ ತೀರ್ಪಿನ ಕುರಿತು ತೀವ್ರ ಕುತೂಹಲ ಕೆರಳಿತ್ತು.

ಹಿಜಾಬ್ ತೀರ್ಪು; ರಾಜ್ಯಾದ್ಯಂತ ಹೈ ಅಲರ್ಟ್; ಕೆಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button