Latest

ಹಿಜಾಬ್ ಧರಿಸಿ ಅಧಿವೇಶನಕ್ಕೆ ಬಂದ ಶಾಸಕಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಇಂದಿನಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಿದ್ದು, ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ ಹಿಜಾಬ್ ಧರಿಸಿ ಅಧಿವೇಶಕ್ಕೆ ಆಗಮಿಸಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದ ಸಂದರ್ಭದಲ್ಲಿ ಹಿಜಾಬ್ ಗೆ ಅವಕಾಶ ನೀಡುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಕಾಂಗ್ರೆಸ್ ಶಾಸಕಿ ಖನೀಜ್ ಫಾತೀಮಾ, ಅಧಿವೇಶನಕ್ಕೆ ನಾನು ಹಿಜಾಬ್ ಧರಿಸಿ ಹೋಗುತ್ತೇನೆ. ಧೈರ್ಯವಿದ್ದರೆ ತಡೆಯಲಿ ಎಂದು ಹೇಳಿದ್ದರು. ಅದರಂತೆ ಇದೀಗ ಶಾಸಕಿ ಸದನಕ್ಕೆ ಹಿಜಾಬ್ ಧರಿಸಿ ಆಗಮಿಸಿದ್ದಾರೆ.

ಹಿಜಾಬ್ ಹಾಗೂ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ವಿಪಕ್ಷ ಕಾಂಗ್ರೆಸ್ ಮುಗಿಬೀಳಲು ಸಿದ್ಧತೆ ನಡೆಸಿದ್ದು, ಸದನದಲ್ಲಿ ಹಿಜಾಬ್ ವಿವಾದ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ದಟ್ಟವಾಗಿದೆ.

ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭ; ಪೊಲೀಸ್ ಬಿಗಿ ಭದ್ರತೆ
ಕನ್ನಡದ ಹಿರಿಯ ನಟ ರಾಜೇಶ್ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button