Latest

ಶಾಲಾ-ಕಾಲೇಜುಗಳಲ್ಲಿ ಏಕರೂಪದ ಸಮವಸ್ತ್ರ ಜಾರಿ – ರಾಜ್ಯ ಸರಕಾರದ ಹೊಸ ಆದೇಶ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ವಿವಾದಕ್ಕೆ ಬ್ರೇಕ್ ಹಾಕಲು ಯತ್ನಿಸಿರುವ ರಾಜ್ಯ ಸರ್ಕಾರ ಶಾಲಾ-ಕಾಲೇಜುಗಳಲ್ಲಿ ಏಕರೂಪದ ಸಮವಸ್ತ್ರ ಜಾರಿ ಮಾಡಿ ಆದೇಶ ಹೊರಡಿಸಿದೆ.

ಪಿಯು ಕಾಲೇಜುಗಳಲ್ಲಿ ಅಲ್ಲಿನ ಕಾಲೇಜು ಅಭಿವೃದ್ಧಿ ಮಂಡಳಿ ನಿಗದಿ ಪಡಿಸಿದ ಸಮವಸ್ತ್ರವೇ ಅಂತಿಮವಾಗಿದೆ. ಒಂದು ವೇಳೆ ಸಮವಸ್ತ್ರ ನಿಗದಿ ಮಾಡದಿದ್ದರೆ ಸಮರ್ಪಕ ಉಡುಪು ಜಾರಿಗೊಳಿಸಬೇಕು ಎಂದು ತಿಳಿಸಿದೆ.

Home add -Advt

ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿದ ಸಮವಸ್ತ್ರ ಹಾಗೂ ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸುವ ಯೂನಿಫಾರ್ಮ್ ಕಡ್ಡಾಯವಾಗಿದೆ ಎಂದು ಸರ್ಕಾರ ತಿಳಿಸಿದೆ. ಈ ಮೂಲಕ ಹಿಜಾಬ್ ಹಾಗೂ ಕೇಸರಿ ಶಾಲು ಜಟಾಪಟಿಗೆ ಅಂತ್ಯ ಹಾಡಲು ಪ್ರಯತ್ನಿಸಿದೆ.

ಹಿಜಾಬ್ ವಿವಾದ; ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ರೂಲಿಂಗ್
ಮಕ್ಕಳಲ್ಲೇಕೆ ಕೋಮು ಭಾವನೆ ಬಿತ್ತುತ್ತಿದ್ದೀರಿ? ರಾಷ್ಟ್ರೀಯ ಪಕ್ಷಗಳಿಗೆ ಸಾಮರಸ್ಯದ ಕಾಳಜಿ ಇದ್ದರೆ ವಿಚಾರ ಇಲ್ಲಿಗೆ ಬಿಡಲಿ

Related Articles

Back to top button