ಪ್ರಗತಿವಾಹಿನಿ ಸುದ್ದಿ: ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದು ವಾಹನ ಸಂಚಾರಕ್ಕೆ ಸಮಸ್ಯೆ ಆಗಿದೆ ಎಂದು ತಿಳಿದು ಬಂದಿದೆ
ಚಾರ್ಮಾಡಿ ಘಾಟ್ ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ದಾರಿಯಾಗಿದೆ. ಈ ಗುಡ್ಡ ಕುಸಿತದಿಂದ ವಾಹನ ಸವಾರರಿಗೆ ಕಿರಿಕಿರಿಯಾಗಿದೆ. ಮೂಡಿಗೆರೆಯಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಗುಡ್ಡ ಕುಸಿದ ಹಿನ್ನೆಲೆ 1 ಗಂಟೆಗಳ ಕಾಲ ಕೊಟ್ಟಿಗೆಹಾರದಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಇದರಿಂದ ಕೊಟ್ಟಿಗೆಹಾರ ಚೆಕ್ ಪೋಸ್ಟ್ ನಿಂದ ಮಂಗಳೂರು ಕಡೆಗೆ ಯಾವುದೇ ವಾಹನ ತೆರಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗಿದೆ.
ಇನ್ನು ಮಳೆ, ಗಾಳಿ ಹೊಡೆತಕ್ಕೆ ಮನೆಗಳು, ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿವೆ. ಮಲೆನಾಡು ಭಾಗದ ಶೃಂಗೇರಿ, ಕೊಪ್ಪ, ನರಸಿಂಹರಾಜಪುರ, ಬಾಳೆಹೊನ್ನೂರು, ಮೂಡಿಗೆರೆ, ಕಳಸ, ಹೊರನಾಡು, ಕೊಟ್ಟಿಗೆಹಾರ, ಚಾರ್ಮಾಡಿಘಾಟಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ