Kannada NewsLatestNational

*ಚಲಿಸುತ್ತಿದ್ದ ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆ: 13 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಚಲಿಸುತ್ತಿದ್ದ ಟಾಟಾ ಸುಮೋ ವಾಹನದ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿddu, 13 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯ ಕಿಲ್ಲರ್-ಉದಯಪುರ ರಸ್ತೆಯ ಕಾಡುನಲ್ಲಾ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ. ಟಾಟಾ ಸುಮೋದಲ್ಲಿದ್ದ ಎಲ್ಲಾ 13 ಜನರು ಸಾವನ್ನಪ್ಪಿದ್ದಾರೆ. ವಾಹನ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಕಳೆದ ಕೆಲವು ದಿನಗಳಿಂದ ಈ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಧಾಅರಾಕಾರ ಮಳೆಯಿಂದಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನ ಅಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Home add -Advt


Related Articles

Back to top button