
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ನಿಗದಿ ಮಾಡಿದೆ. ಚುನಾವಣೆ ಹಿನ್ನೆಲೆಯಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಿದೆ.
ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಚುನಾವಣಾ ಆಯುಕ್ತ ರಾಜೀವ್ ಕುಮಾರ್, ಹಿಮಾಚಲ ಪ್ರದೇಶದಲ್ಲಿ ನವೆಂಬರ್ 12ರಂದು ವಿಧಾನಸಭಾ ಚುನಾವಣೆ ನಡೆಯಲಿದೆ. 68 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ ಎಂದರು.
ನಾಮಪತ್ರ ಸಲ್ಲಿಕೆಗೆ ಅಕ್ಟೀಬರ್ 25 ಕೊನೇ ದಿನ. ಅ.29 ನಾಮಪತ್ರ ವಾಪಸ್ ಪಡೆಯಲು ಕೊನೆ ದಿನವಾಗಿದೆ. ಡಿಸೆಂಬರ್ 8ರಂದು ಫಲಿತಾಂಶ ಪ್ರಕಟವಾಗಲಿದೆ. ಯಾವುದೇ ಅಡೆತಡೆ ಇಲ್ಲದೇ ಚುನಾವಣೆ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ತಿಳಿಸಿದರು.
80 ವರ್ಷಕ್ಕಿಂತ ಮೇಲ್ಪಟ್ಟ ಮತದಾರರ ಮನೆಗೆ ತೆರಳಿ ಮತದಾನ ಮಾಡಿಸಿಕೊಳ್ಳಲಾಗುವುದು. ಸಂಪೂರ್ಣ ಪ್ರಕ್ರಿಯೆ ವಿಡೊಯೋ ರೆಕಾರ್ಡ್ ಮಾಡಲಾಗುವುದು. ಚುನಾವಣೆಯಲಿ ಕೋವಿಡ್ ಮಾರ್ಗಸೂಚಿ ಪಾಲಿಸಲಾಗುವುದು ಎಂದು ತಿಳಿಸಿದರು.
ಹಿಮಾಚಲ ಪ್ರದೇಶ ವಿಧಾನಸಭೆಯ ಪ್ರಸಕ್ತ ಅವಧಿ 2023 ಜನವರಿ 8ರಂದು ಕೊನೆಗೊಳ್ಳಲಿದೆ.
ಮುರುಘಾಮಠದಲ್ಲಿ 4 ವರ್ಷದ ಅಪರಿಚಿತ ಹೆಣ್ಣು ಮಗು ಪತ್ತೆ
https://pragati.taskdun.com/latest/murughamatha4-years-girlfound/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ