
ಪ್ರಗತಿವಾಹಿನಿ ಸುದ್ದಿ; ಶಿಮ್ಲಾ: ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಸಿಎಂ ಜೈರಾಮ್ ಠಾಕೂರ್ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಹಿಮಾಚಲ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದೆ. 39 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 26 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಪಕ್ಷೇತರ ಅಭ್ಯರ್ಥಿಗಳು 4 ಕ್ಷೇತ್ರಗಳಲ್ಲಿ ಮುನ್ನಡೆಲಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ಖಚಿತವಾಗುತ್ತಿದ್ದಂತೆ ಸಿಎಂ ಜೈರಾಮ್ ಠಾಕೂರ್ ರಾಜೀನಾಮೆ ಘೋಷಿಸಿದ್ದಾರೆ.
ಜೈರಾಮ್ ಠಾಕೂರ್ ತಮ್ಮ ಕ್ಷೇತ್ರ ಸೆರಾಜ್‌ನಿಂದ ಭರ್ಜರಿ ಗೆಲುವು ಪಡೆದಿದ್ದಾರೆಯಾದರೂ ರಾಜ್ಯದಲ್ಲಿ ಪಕ್ಷ ಸೋಲನ್ನನಭವಿಸಿದೆ. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲಿಯೇ ರಾಜ್ಯಪಾಲರನ್ನು ಭೇಟಿಯಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತೇನೆ ಎಂದು ತಿಳಿಸಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗುಲುವಿನತ್ತ ಸಾಗಿದೆ. ನಾನು ಜನರ ಆದೇಶವನ್ನು ಗೌರವಿಸುತ್ತೇನೆ. ಜನತಾ ತೀರ್ಪಿಗೆ ತಲೆಬಾಗಿ ರಾಜೀನಾಮೆ ಕೊಡುತ್ತೇನೆ. ಕಳೆದ 5 ವರ್ಷಗಳಲ್ಲಿ ಪ್ರಧಾನಿ ಮೋದಿ ಹಾಗೂ ಇತರ ಕೇಂದ್ರ ನಾಯಕರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಹೇಳಿದ್ದಾರೆ.
ರಾಜಕೀಯವನ್ನು ಲೆಕ್ಕಿಸದೆ ರಾಜ್ಯದ ಅಭಿವೃದ್ಧಿಗೆ, ಕ್ಷೇತ್ರದ ಜನರಿಗಾಗಿ ಕೆಲಸ ಮಾಡುತೇನೆ. ಪಕ್ಷದ ಹಿನ್ನಡೆಗೆ ಆತ್ಮಾವಲೋಕನ ಮಾಡಿಕೊಂಡು ಮುಂದಿನ ದಿನಗಳಲ್ಲಿ ನಮ್ಮ ನ್ಯೂನತೆಗಳನ್ನು ತಿದ್ದಿಕೊಲ್ಳುವುದಾಗಿ ನಿರ್ಗಮಿತ ಸಿಎಂ ಠಾಕೂರ್ ತಿಳಿಸಿದ್ದಾರೆ.
ಹಿಮದ ನಾಡಿನಲ್ಲಿ ಕಾಂಗ್ರೆಸ್ ಕಮಾಲ್; ಕುತೂಹಲದತ್ತ ಫಲಿತಾಂಶ
https://pragati.taskdun.com/himachala-pradeshagujarathelection-result/