
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ 7 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಹಿಮಾಚಲ ಪ್ರದೇಶದ ಚಾಂಬಾ ಜಿಲ್ಲೆಯ ಮಸ್ರುಂಡ್- ಹಮಲ್ ರಸ್ತೆಯಲ್ಲಿ ಬೊಲೆರೋ ವಾಹನವೊಂದು ನಿಯಂತ್ರಣ ತಪ್ಪಿ ಆಳವಾದ ಕಂದಕಕ್ಕೆ ಬಿದ್ದಿದೆ. ದುರಂತದಲ್ಲಿ 7ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಪ್ರಾಥಮಿಕ ಮಾಹಿತಿ ಪ್ರಕಾರ, ಬುಧವಾರ ರಾತ್ರಿ ಸುಮಾರು 2 ಗಂಟೆ ಸಮಯದಲ್ಲಿ ಅಪಘಾತ ನಡೆದಿದೆ. ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಒಳಗಿದ್ದ ಎಲ್ಲಾ ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರಲ್ಲಿ 3 ಮಹಿಳೆಯರು ಮತ್ತು 3 ಪುರುಷರು ಸೇರಿದ್ದಾರೆ.
ಮೃತರು ಕುತೇಡ್ ಗ್ರಾಮ ಪಂಚಾಯತ್‌ನ ಮಹಲ್ ಗ್ರಾಮದ ನಿವಾಸಿಗಳಾಗಿದ್ದು, ಕಾಕ್ರೋಧ ಗ್ರಾಮದಲ್ಲಿ ನಡೆದ ಧಾರ್ಮಿಕ ಸಮಾರಂಭದ ಬಳಿ ನಡೆದ ಭೋಜನಕ್ಕೆ ಹೋಗಿ ಮನೆಗೆ ಮರಳುತ್ತಿದ್ದರು. ಹಳ್ಳದ ಭಾಗದಲ್ಲಿ ವಾಹನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ



