
ಪ್ರಗತಿವಾಹಿನಿ ಸುದ್ದಿ; ಶಿಮ್ಲಾ: ಗುಜರಾತ್ ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವಿನತ್ತ ಸಾಗಿದ್ದರೆ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಎರಡೂ ರಾಜ್ಯಗಳ ಚುನಾವಣಾ ಫಲಿತಾಂಶ ಕ್ಷಣ ಕ್ಷಣಕ್ಕೂ ಭಾರಿ ಕುತೂಹಲಕ್ಕೆ ಕಾರಣವಾಗುತ್ತಿದೆ.
ಹಿಮಾಚಲ ಪ್ರದೇಶದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಬಿಜೆಪಿ ಹಿಂದಿಕ್ಕಿದ ಕಾಂಗ್ರೆಸ್ ಕಮಾಲ್ ಮಾಡಿದೆ. 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದ್ದು ಸರ್ಕಾರ ರಚನೆಯತ್ತ ಮುನ್ನುಗ್ಗಿದೆ.
ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ 40 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ. ಪಕ್ಷೇತರ ಅಭ್ಯರ್ಥಿಗಳು 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಇನ್ನು ಗುಜರಾತ್ ನಲ್ಲಿ 154 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯ ಮೂಲಕ ಐತಿಹಾಸಿಕ ಗೆಲುವಿನತ್ತ ಸಾಗಿದೆ. ಕಾಂಗ್ರೆಸ್ 20, ಆಪ್ 6, ಇತರೆ 4 ಕ್ಷೇತ್ರಗಳಲ್ಲಿ ಮುನ್ನಡೆ ಯಲ್ಲಿವೆ.
ಗುಜರಾತ್ ನಲ್ಲಿ ಸತತ 7ನೇ ಬಾರಿ BJP ಅಧಿಕಾರಕ್ಕೆ; ಸಿಎಂ ಬೊಮ್ಮಾಯಿ ಸಂತಸ
https://pragati.taskdun.com/gujarathhimachala-pradeshelection-resultcm-basavaraj-bommaireaction/