Latest

ಮನೆಗೆ ನುಗ್ಗಿದ ಟ್ರಕ್; ಮೂವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಟ್ರಕ್ ಏಕಾಏಕಿ ಮನೆಗೆ ನುಗ್ಗಿದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ನಡೆದಿದೆ.

ಇಂದು ಮುಂಜಾನೆ ಈ ದುರಂತ ಸಂಭವಿಸಿದ್ದು, ರಸ್ತೆಯಲ್ಲಿ ಚಲಿಸುತ್ತಿದ್ದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದೆ. ಅಪಘಾತದಲ್ಲಿ ಮನೆಯಲ್ಲಿದ್ದ ಮೂವರು ಸಾವನ್ನಪ್ಪಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಡಿ ಜಿಲ್ಲಾ ಎಸ್ ಪಿ ಆಶಿಶ್ ಶರ್ಮಾ ಮಾಹಿತಿ ನೀಡಿದ್ದಾರೆ.
ಸಂಸದ ತೇಜಸ್ವಿ ಸೂರ್ಯ ವಿಚಾರಣೆಗೊಳಪಡಿಸಿದ ದೆಹಲಿ ಪೊಲೀಸರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button