Latest

ಹಿಮಾಚಲ ಪ್ರದೇಶ ಚುನಾವಣೆ: ಸಿಎಂ ಜೈರಾಮ್ ಠಾಕೂರ್ ಗೆ ಭರ್ಜರಿ ಗೆಲುವು

ಪ್ರಗತಿವಾಹಿನಿ ಸುದ್ದಿ; ಶಿಮ್ಲಾ: ಗುಜರಾತ್ ಹಾಗೂ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣಾ ಮತ ಎಣಿಕೆ ಫಲಿತಾಂಶ ಕ್ಷಣ ಕ್ಷಣಕ್ಕೂ ರೋಚಕ ಘಟ್ಟ ತಲುಪಿದೆ.

ಹಿಮಾಚಲ ಪ್ರದೇಶದಲ್ಲಿ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಜಯಭೇರಿ ಬಾರಿಸಿದ್ದಾರೆ. ಸೆರಾಜ್ ವಿಧಾನಸಭಾ ಕ್ಷೇರದಲ್ಲಿ ಸಿಎಂ ಜೈರಾಮ್ ಠಾಕೂರ್ ಜಯಗಳಿಸಿದ್ದು, 20,425 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ 29 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ 36 ಕ್ಷೇತ್ರಗಳಲ್ಲಿ ಹಾಗೂ ಪಕ್ಷೇತರರು 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಸರತ್ತು ನಡೆಸಿದ್ದು, ಪಕ್ಷೇತರರು ಹಾಗೂ ಕಾಂಗ್ರೆಸ್ ನ ರೆಬಲ್ ಅಭ್ಯರ್ಥಿಗಳ ಬೆಂಬಲ ಪಡೆಯಲು ಮುಂದಾಗಿದೆ. ಈ ನಿಟ್ಟಿನಲ್ಲಿ ಬಿಜೆಪಿ ಇಬ್ಬರು ವೀಕ್ಷಕರನ್ನು ಹಿಮಾಚಲ ಪ್ರದೇಶಕ್ಕೆ ಕಳುಹಿಸಿದ್ದು, ಪಕ್ಷೇತರ ಸಂಪರ್ಕದಲ್ಲಿ ಇದ್ದಾರೆ ಎಂದು ತಿಳಿದುಬಂದಿದೆ.

Home add -Advt

ಗುಜರಾತ್ ಫಲಿತಾಂಶ: ಸಾರ್ವಕಾಲಿಕ ದಾಖಲೆ ಬರೆದ

https://pragati.taskdun.com/gujarathvidhanasabha-electionbjp-new-record/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button