ಪ್ರಗತಿವಾಹಿನಿ ಸುದ್ದಿ; ಡೆಹ್ರಾಡೂನ್: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿದ್ದು, 9 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಹಲವರು ನಾಪತ್ತೆಯಾಗಿದ್ದಾರೆ.
ಕಳೆದ ಒಂದು ವಾರದಿಂದ ಹಿಮಾಚಲ ಪ್ರದೆಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಇಂದು ಏಕಾಏಕಿ ಸಂಭವಿಸಿದ ಮೇಘಸ್ಫೊಟದಲ್ಲಿ 9 ಜನರು ಸಾವನ್ನಪ್ಪಿದ್ದಾರೆ. ಐವರನ್ನು ರಕ್ಷಿಸಲಾಗಿದೆ.
ಹಿಮಾಲಯದ ಜಾಡೂನ್ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಹಠಾತ್ ಪ್ರವಾಹದಿಂದಾಗಿ ಮನೆಗಳು, ದನದ ಕೊಟ್ಟಿಗೆ ನೀರಿನಲ್ಲಿ ಕೊಚ್ಚಿ ಹೋಗಿವೆ ಎಂದು ಕಂದಘಾಟ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಸಿದ್ಧಾರ್ಥ ಆಚಾರ್ಯ ತಿಳಿಸಿದ್ದಾರೆ.
ಕಳೆದ 24 ಗಂಟೆಯಿಂದ ಉತ್ತರಾಖಂಡ್ ನಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಭೂ ಕುಸಿತ ಸಂಭವಿಸಿದೆ. ರಸ್ತೆ ಮಾರ್ಗಗಳು ಬಂದ್ ಆಗಿವೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ಶಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ