*ಜನಸ್ನೇಹಿ ರಾಜಕಾರಣ ನನ್ನ ಉದ್ದೇಶ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿಯೇ ನನ್ನ ಮೂಲಮಂತ್ರ. ಅಭಿವೃದ್ಧಿಯಲ್ಲಿ ಎಂದಿಗೂ ರಾಜಕಾರಣ ಮಾಡಿಲ್ಲ. ಜನಸ್ನೇಹಿ ರಾಜಕಾರಣವೇ ನನ್ನ ಉದ್ಧೇಶ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.
ಹಿಂಡಲಗಾ ಜಯನಗರದಲ್ಲಿ ನೈಸರ್ಗಿಕ ಅನಿಲ ಪೈಪ್‌ಲೈನ್ ಕಾಮಗಾರಿಗೆ ಮಂಗಳವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,
ಜಯನಗರ ಬಡಾವಣೆಗೆ ಅಗತ್ಯ ಅನುದಾನ ನೀಡಿ, ಸಮಗ್ರವಾಗಿ ಅಭಿವೃದ್ದಿಪಡಿಸಲಾಗುವುದು ಎಂದರು.
15 ದಿನದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು. ಮಲ್ಲಿಕಾರ್ಜುನ ದೇವಸ್ಥಾನದ ಎದುರು ಕಾರ್ಯಕ್ರಮಗಳನ್ನು ನಡೆಸಲು 25 ಲಕ್ಷ ರೂ ಅನುದಾನದಲ್ಲಿ ಅಗತ್ಯ ವ್ಯವಸ್ಥೆ ಮಾಡಿಕೊಡಲಾಗುವುದು. ಸಮರ್ಪಕ ಕುಡಿಯುವ ನೀರಿನ ಸೌಲಭ್ಯ, ದೇವಸ್ಥಾನದ ಮುಂದೆ ಗಾರ್ಡನ್ ನಿರ್ಮಾಣ ಮಾಡಲಾಗುವುದು. 6 ತಿಂಗಳೊಳಗಾಗಿ ಅತ್ಯುತ್ತಮ ರಸ್ತೆಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಹೆಬ್ಬಾಳಕರ್ ವಿನಯಶೀಲ ರಾಜಕಾರಣಿ
ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಬಿ.ಎಂ.ಹೊಸಪೇಟೆ ಮಾತನಾಡಿ, ಲಕ್ಷ್ಮೀ ಹೆಬ್ಬಾಳಕರ್ ಅವರು ವಿನಯಶೀಲ ರಾಜಕಾರಣಿ. ಸದಾ ಜನರಿಗೆ ಸ್ಪಂದಿಸುವ ಅಪರೂಪದ ವ್ಯಕ್ತಿತ್ವ ಅವರದ್ದು. ಈ ಹಿಂದೆ ನಾವು ಕೇಳದಿದ್ದರೂ ಬಡಾವಣೆಯಲ್ಲಿ ಹಲವಾರು ಕಾರ್ಯಕ್ರಮ ಮಾಡಿಕೊಟ್ಟಿದ್ದಾರೆ. ದೇವಸ್ಥಾನ ನಿರ್ಮಾಣಕ್ಕೆ ಅನುದಾನ ಒದಗಿಸಿದ್ದಾರೆ. 18 ಲಕ್ಷ ರೂ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಿಸಿದ್ದಾರೆ. ವಾಕಿಂಗ್ ಟ್ರ್ಯಾಕ್ ನಿರ್ಮಾಣ ಮಾಡಿಸಿದ್ದಾರೆ. ದೇವಸ್ಥಾನದ ಆವರಣದಲ್ಲಿ ಪೇವರ್ಸ ಅಳವಡಿಸಿಕೊಟ್ಟಿದ್ದಾರೆ. ಅವರ ಕಾರ್ಯವನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಇಂತಹ ರಾಜಕಾರಣಿ ಸಿಗುವುದು ಬಹಳ ಅಪರೂಪ ಎಂದರು.
ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಮಹಾನಗರ ಪಾಲಿಕೆಯ ಸದಸ್ಯ ಮುಸ್ತಾಕ್ ಮುಲ್ಲಾ, ಮೆಗಾ ಗ್ಯಾಸ್ ವ್ಯವಸ್ಥಾಪಕ ಸುಶಾಂತ, ಉಪ ವ್ಯವಸ್ಥಾಪಕ ಮಯೂರ್ ಹಿರೇಮಠ್ ಹಾಗೂ ಸ್ಥಳೀಯ ಮುಖಂಡರು, ಮಹಿಳೆಯರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.




