Kannada NewsLatest

*ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ಸ್ಥಾಪನೆಗೆ ಹಿಂದೂ ಜನ ಜಾಗೃತಿ ಸಮಿತಿ ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಕಾನೂನು ಜಾರಿಗೆ ತರುವಂತೆ ಹಾಗೂ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ಸ್ಥಾಪನೆಗೆ ಒತ್ತಾಯಿಸಿ ಹಿಂದೂ ಜನ ಜಾಗೃತಿ ಸಮಿತಿ ರಾಜ್ಯ ವಕ್ತಾರ ಮೋಹನ ಗೌಡ ನೇತೃತ್ವದಲ್ಲಿ ಸದಸ್ಯರು ಶಾಸಕರಾದ ಅಭಯ್ ಪಾಟೀಲ್ ಹಾಗೂ ಅನೀಲ್ ಬೆನಕೆ ಅವರಿಗೆ ಮನವಿ ಮಾಡಿದರು.

ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು. ಲವ್ ಜಿಹಾದ್ ಘಟನೆಗಳನ್ನು ತಡೆಯಲು ವಿಶೇಷ ಲವ್ ಜಿಹಾದ್ ವಿರೋಧಿ ಪೊಲೀಸ್ ದಳವನ್ನು ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದರು.

Home add -Advt

ದೆಹಲಿಯಲ್ಲಿ ಅಫ್ತಾಬ್ ಪೂನಾವಾಲಾ ಎಂಬಾತ ಹಿಂದೂ ಯುವತಿ ಶ್ರದ್ಧಾ ವಾಲ್ಕರ್ ಳನ್ನು ಲವ್ ಜಿಹಾದ್ ಗೆ ಬೀಳಿಸಿ, ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದು ಬಳಿಕ ಆಕೆಯನ್ನು ಬರ್ಬರವಾಗಿ ಹತ್ಯೆಗೈದು, ಆಕೆಯ ದೇಹವನ್ನು 35 ತುಂಡುಗಳನ್ನಾಗಿ ಕತ್ತರಿಸಿ ವಿಕೃತಿ ಮೆರೆದ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದೆ.

ಇತ್ತೀಚೆಗೆ ರಾಯಚೂರಿನಲ್ಲಿ ವಿವಾಹಿತ ಮಹಿಳೆಯನ್ನು ಸಲೀಮ್ ಎಂಬ ಜಿಹಾದಿ ಬ್ರೈನ್ ವಾಷ್ ಮಾಡಿ ಅಪಹರಿಸಿ, ಮತಾಂತರ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಅದರ ಬೆನ್ನಲ್ಲೇ ರಾಯಚೂರಿನಲ್ಲಿ ಇನ್ನೋರ್ವ ಯುವತಿಯನ್ನು ರಿಹಾನ್ ಎಂಬಾತ ಹೈದ್ರಾಬಾದ್ ಗೆ ಕರೆದೊಯ್ದು ಆಕೆಯನ್ನು ಮತಾಂತರ ಮಾಡಿ ನಿಖಾಹ ಮಾಡಿದ ಘಟನೆ ಜರುಗಿದೆ.

ಮಂಗಳೂರು, ಬೆಂಗಳೂರು, ಉಡುಪಿ, ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಇಂತದ್ದೇ ಹಲವು ಪ್ರಕರಣಗಳು ಬೆಳಕಿಗೆ ಬಂದಿವೆ. ಹಿಂದೂ ಹೆಣ್ಣು ಮಕ್ಕಳನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಇಸ್ಲಾಂ ಗೆ ಮತಾಂತರಗೊಳಿಸಲಾಗುತ್ತಿದೆ. ಈ ಮೂಲಕ ಹಿಂದೂ ಯುವತಿಯರು ಭಯಾನಕ ಶೋಷಣೆಗೆ ಒಳಗಾಗುತ್ತಿದ್ದಾರೆ. ಮತಾಂತರ ನಿಷೇಧ ಕಾಯ್ದೆ ಇದ್ದರೂ ಹಿಂದೂ ಯುವತಿಯರನ್ನು ಲವ್ ಜಿಹಾದ್ ಗೆ ಕೆಡವಿ ಮತಾಂತರ ಮಾಡಲಾಗುತ್ತಿರುವುದು ದುರಂತ. ಈ ಸಮಸ್ಯೆಗೆ ಪರಿಹಾರ ನಿಟ್ಟಿನಲ್ಲಿ ರಾಜ್ಯದಲ್ಲಿಯೂ ಉತ್ತರ ಪ್ರದೇಶ ಮಾದರಿಯಲ್ಲಿ ಮತಾಂತರ ನಿಷೇಧ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಅಲ್ಲದೇ ಲವ್ ಜಿಹಾದ್ ವಿರೋಧಿ ಪೊಲೀಸ್ ದಳ ಸ್ಥಾಪನೆ ಮಾಡಬೇಕು ಎಂದು  ಹಿಂದೂ ಜನ ಜಾಗೃತಿ ಸಮಿತಿ ಸದಸ್ಯರು ಒತ್ತಾಯಿಸಿದ್ದಾರೆ.

LoveJIhad_MLA Letter

*13 ವರ್ಷದ ಬಾಲಕಿ ಗರ್ಭಿಣಿ; ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ*

https://pragati.taskdun.com/hasana13-yers-girlgang-rape3-arrestedpocso-case/

*ಮುರುಘಾಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ರಾಜ್ಯ ಸರ್ಕಾರ ಆದೇಶ*

https://pragati.taskdun.com/murugha-mathaadalitadhikari-p-s-vastradappoint/

Related Articles

Back to top button