Kannada NewsKarnataka NewsLatest

*ಅರುಣ್ ಪುತ್ತಿಲ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ನಿಷೇಧಾಜ್ಞೆ ಉಲ್ಲಂಘಿಸಿ ಪ್ರಚೋದನಕಾರಿಭಾಷಣ ಮಾಡಿದ್ದ ಆರೋಪದ ಮೇರೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಶಿವಮೊಗ್ಗ ಜಿಲ್ಲೆಯ ರಾಗಿಗುಡ್ಡದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಕೂಡ ಅರುಣ್ ಪುತ್ತಿಲ ರಾಗಿಗುಡ್ಡಕ್ಕೆ ಭೇಟಿ ನೀಡಿ, ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದೂರು ದಾಖಲಾಗಿತ್ತು.

Home add -Advt

ಇದೀಗ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲಾಗಿದೆ. ಶಿವಮೊಗ್ಗದ ರಾಗಿಗುಡ್ಡದಲ್ಲಿ 6 ದಿನಗಳ ಹಿಂದೆ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲುತೂರಾಟ ನಡೆದು ಗಲಾಟೆಯಾಗಿತ್ತು. ಘಟನೆಯಲ್ಲಿ ಪೊಲೀಸರು ಸೇರಿದಂತೆ 7 ಜನರು ಗಯಗೊಂಡಿದ್ದರು. ಪ್ರಕರಣ ಸಂಬಂಧ ಹಲವರನ್ನು ಪೊಲಿಸರು ಬಂಧಿಸಿದ್ದಾರೆ.

ರಾಗಿಗುಡ್ಡದಲ್ಲಿ ಪರಿಸ್ಥಿತಿ ಬೂದಿ ಮುಚ್ಚ್ಜಿದ ಕೆಂಡದಂತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿಯಲ್ಲಿದೆ. ಆದಾಗ್ಯೂ ಸ್ಥಳಕ್ಕೆ ಭೇಟಿ ನೀಡಿದ್ದ ಅರುಣ್ ಪುತ್ತಿಲ ಪ್ರಚೋದನಕಾರಿ ಮಾತುಗಳನ್ನು ಆಡಿದ್ದರು.

Related Articles

Back to top button