EducationKannada NewsKarnataka NewsLatest

*ಈ ಶಾಲೆಗಳಿಗೆ ನಾಳೆ ಅರ್ಧದಿನ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಾಳೆ ಮಲೆನಾಡಿನ ಭಾಗದ ಶಾಲೆಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ.

ಬೆಳಗಾವಿಯಲ್ಲೂ ಗಣೇಶ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ಅರ್ಧ ದಿನ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ರಜೆ ನೀಡಲಾಗಿದೆ.

ನಾಳೆ ಸೆ.25ರಂದು ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಹಿನ್ನೆಲೆಯಲ್ಲಿ ನಗರದ ಶಾಲೆಗಳಿಗೆ ಅರ್ಧದಿನ ರಜೆ ಘೋಷಣೆ ಮಾಡಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಶಿವಮೊಗ್ಗ ನಗರ ಶಾಲಾ ಅವಧಿಯಲ್ಲಿ ಬದಲಾವಣೆ ಮಾಡಲಾಗಿದ್ದು, ನಾಳೆ ಬೆಳಿಗ್ಗೆ 8:30 ರಿಂದ 12:30 ರವರೆಗೆ ಮಾತ್ರ ತರಗತಿಗಳು / ಪರೀಕ್ಷೆಗಳು ನಡೆಯಲಿವೆ.

ಇನ್ನುಳಿದಂತೆ ​ಮಧ್ಯಾಹ್ನದ ನಂತರ ಶಿವಮೊಗ್ಗ ನಗರ ವ್ಯಾಪ್ತಿಯ ಶಾಲೆಗಳಿಗೆ ರಜೆ ನೀಡಲು ಮುಖ್ಯ ಶಿಕ್ಷಕರಿಗೆ ಶಾಲಾ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

ಇನ್ನು ​SSLC ಅರ್ಧವಾರ್ಷಿಕ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ​SSLC ಪರೀಕ್ಷೆ ಬೆಳಿಗ್ಗೆ 9:00 ರಿಂದ ಮಧ್ಯಾಹ್ನ 1:30 ರವರೆಗೆ ನಡೆಯಲಿವೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button