
ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಮಹಾತ್ಮಾ ಗಾಂಧೀಜಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಹಿಂದೂ ಮಹಾಸಭಾ ಮುಖಂಡ ಧರ್ಮೇಂದ್ರ ಅವರನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.
ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ, ದೇವಾಲಯ ತೆರವು ವಿಚಾರವಾಗಿ ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಕಿಡಿ ಕಾರಿದ್ದರು. ನಾವು ಗಾಂಧೀಜಿಯನ್ನೇ ಬಿಟ್ಟಿಲ್ಲ, ಹಿಂದೂಗಳ ಮೇಲೆ ನಡೆದ ದಾಳಿ ಖಂಡಿಸಿ ಗಾಂಧೀಜಿಯನ್ನೇ ಹತ್ಯೆ ಮಾಡಿದ್ದೇವೆ ಇನ್ನು ನೀವು ಯಾವ ಲೆಕ್ಕ ಸ್ವಾಮಿ…ತುಘಲಕ್ ಸರ್ಕಾರ ನಡೆಸುತ್ತಿದ್ದೀರೇ? ಎಂದು ವಾಗ್ದಾಳಿ ನಡೆಸಿ ಬೆದರಿಕೆಯೊಡ್ಡಿದ್ದರು.
ಧರ್ಮೇಂದ್ರ ಅವರ ಹೇಳಿಕೆ ವಿವಾದದ ಸ್ವರೂಪ ಪಡೆದುಕೊಂಡಿತ್ತು. ಇದರ ಬೆನ್ನಲ್ಲೇ ಕ್ಷಮೆಯಾಚಿಸಿದ್ದರು. ಆದರೀಗ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಧರ್ಮೇಂದ್ರ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.
ಐವರ ಸಾವು ಪ್ರಕರಣ; ಸ್ಫೋಟಕ ರಹಸ್ಯ ತೆರೆದಿಟ್ಟ 3 ಡೆತ್ ನೋಟ್ ಗಳು