Belagavi NewsBelgaum NewsKannada NewsKarnataka News

*ಭಾವೈಕ್ಯತೆಯ ಸಂದೇಶ ಸಾರಿದ ಹಿಂದೂ ಮುಸ್ಲಿಂ ಬಾಂಧವರು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಗಣೇಶ ಚತುರ್ಥಿ ಹಿಂದೂ- ಮುಸ್ಲಿಂ ಭಾವೈಕ್ಯತೆಯ ಸಂಕೇತವಾದ ಹಬ್ಬವಾಗಿದ್ದು, ಹಿಂದೂ-ಮುಸ್ಲಿಂರು ಸೇರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದಾರೆ.

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಗಾರ ಬುದ್ರುಕ್ ಗ್ರಾಮದ ಮೈ ಉಸ್‌ಬಾಣಿಯ ದರ್ಗಾ ಗಲ್ಲಿಯಲ್ಲಿ  ಮೂರ್ತಿ ಪ್ರತಿಷ್ಠಾಪನೆ ಮಾಡಿ ಗ್ರಾಮಸ್ಥರು ಭಾವೈಕ್ಯತೆ  ಮೆರೆದಿದ್ದಾರೆ. ಕಳೆದ ಆರು ವರ್ಷಗಳಿಂದ ಹಿಂದೂ ಮುಸ್ಲಿಂ ಯುವಕರು ಸೇರಿ ಗಣೇಶನನ್ನು ಕೂರಿಸುತ್ತಿದ್ದೇವೆ. ಹಿಂದೂಗಳು ಮುಸ್ಲಿಂರ ಹಬ್ಬಗಳಾದ ಉರುಸ್, ಇದ್ ಮಿಲಾದ್ ಸೇರಿದಂತೆ ಎಲ್ಲ ಹಬ್ಬಗಳನ್ನು ಆಚರಣೆ ಮಾಡಲಾಗುತ್ತೆ. ನಾವೆಲ್ಲರೂ ಏಕತೆ ಭಾವದಿಂದ ಬೇಧ-ಭಾವ ಮಾಡದೇ ಹಬ್ಬ ಆಚರಿಸ್ತೇವೆ. ನಾವೆಲ್ಲರೂ ಅಣ್ಣತಮ್ಮಂದಿರಂತೆ ಕೋಮು ಸೌಹಾರ್ದತೆಯಿಂದ ಹಿಂದೂ- ಇಸ್ಲಾಂ ಧರ್ಮದ ಹಬ್ಬವನ್ನು ಆಚರಣೆ ಮಾಡ್ತೇವೆ ಎಂದು ಮುಸ್ಲಿಂ ಬಾಂಧವರು ತಿಳಿಸಿದ್ದಾರೆ.‌

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button