Belagavi NewsBelgaum News

*ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿದೆ: ಮುತಾಲಿಕ್ ಆರೋಪ*

ಪ್ರಗತಿವಾಹಿನಿ ಸುದ್ದಿ: ವರ್ಷಕ್ಕೊಮ್ಮೆ ಗಣೇಶ ಹಬ್ಬವನ್ನು ಹಿಂದೂಗಳು ಅದ್ದೂರಿಯಿಂದ ಆಚರಣೆ ಮಾಡುತ್ತಾರೆ. ಆದರೆ ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಹಿಂದೂಗಳ ಮೇಲೆ ದೌರ್ಜನ್ಯ ಆಗುತ್ತಿದೆ ಎಂದು ಹುಕ್ಕೇರಿಯಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದ್ದಾರೆ. 

ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಮಾತಾಡಿರುವ ಅವರು, ಗಣೇಶ ಉತ್ಸವಗಳಲ್ಲಿ ಡಿಜೆ ಸೌಂಡ್ ಬಳಕೆ ಮಾಡುತ್ತಿರುವವರ ವಿರುದ್ಧ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿದೆ. ಪೊಲೀಸ್ ಇಲಾಖೆ ಮುಖಾಂತರ ಸರ್ಕಾರ ಹಿಂದೂಗಳಿಗೆ ತೊಂದರೆ ಕೊಡುತ್ತಿದೆ. ಸುಪ್ರೀಂ ಕೋರ್ಟ್ ಆದೇಶವಿದೆ ಹೀಗಾಗಿ ಡಿಜೆ ಸೌಂಡ್‌ಗಳನ್ನು ತೆರವುಗೊಳಿಸುತ್ತಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ ಮಸೀದಿಗಳಲ್ಲಿ ಅಳವಡಿಸಿರುವ ಮೈಕ್‌ ಸಂಬಂಧಿಸಿದಂತೆಯೂ ಸುಪ್ರೀಂ ಕೋರ್ಟ್‌ನ ಆದೇಶವಿದೆ. ಪ್ರತಿನಿತ್ಯ ಮಸೀದಿಗಳ ಮೈಕ್ ಮುಖಾಂತರ ಮುಸ್ಲಿಂರು ಪ್ರಾರ್ಥನೆ ಮಾಡುತ್ತಾರೆ. ಇದರಿಂದಾಗಿ ನಾವುಗಳು ಪ್ರತಿನಿತ್ಯ ತೊಂದರೆ ಎದುರಿಸುತ್ತಿದ್ದೇವೆ. ಇದರ ಬಗ್ಗೆ ಸರ್ಕಾರವಾಗಲಿ, ಪೊಲೀಸ್ ಇಲಾಖೆ ಆಗಲಿ ಮಾತನಾಡುವುದಿಲ್ಲ ಎಂದರು.

ಆದ್ರೆ ವರ್ಷಕ್ಕೊಮ್ಮೆ ಆಚರಿಸುವ ಗಣೇಶ ಹಬ್ಬದ ಡಿಜೆ ಸೌಂಡ್ ಬಗ್ಗೆ ತಕರಾರು ಮಾಡುತ್ತಾರೆ. ಹೀಗಾಗಿ ಹಿಂದೂಗಳು ಇದ್ಯಾವುದನ್ನು ಲೆಕ್ಕಿಸದೇ ಗಣೇಶೊತ್ಸವಗಳಲ್ಲಿ ಡಿಜೆ ಸೌಂಡ್ ಬಳಕೆ ಮಾಡುವಂತೆ ಪ್ರಮೋದ್ ಮುತಾಲಿಕ್ ಕರೆ ನೀಡಿದ್ದಾರೆ.‌

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button