*ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಶ್ರೀ ಫಡಿಬಸವೇಶ್ವರ ಮಂದಿರದಿಂದ ಸ್ಮಶಾನದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಸಂದೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.
ಗ್ರಾಮಸ್ಥರ ಬಹುದಿನಗಳ ಬೇಡಿಕೆಯ ಹಿನ್ನೆಲಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರು ವಿಶೇಷ ಅನುದಾನ ಒದಗಿಸಿದ್ದಾರೆ. ಸುಮಾರು ₹1 ಕೋಟಿ ವೆಚ್ಚದಲ್ಲಿ ಈ ರಸ್ತೆ ನಿರ್ಮಾಣಗೊಳ್ಳುತ್ತಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವಾಗಲಿದೆ.
ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು ಹಳ್ಳಿಯಲ್ಲೂ ಸುಸಜ್ಜಿತ ರಸ್ತೆಗಳು ನಿರ್ಮಾಣವಾಗುತ್ತಿದ್ದು, ಆದ್ಯತೆಯ ಮೇಲೆ ಮೂಲಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಇದರಿಂದಾಗಿ ಇತಿಹಾಸದಲ್ಲೇ ಮೊದಲಬಾರಿಗೆ ಕ್ಷೇತ್ರದ ಚಿತ್ರಣವೇ ಸಕಾರಾತ್ಮಕವಾಗಿ ಬದಲಾವಣೆ ಕಾಣುತ್ತಿದೆ. ಕ್ಷೇತ್ರದ ಅಭಿವೃದ್ಧಿ ಹಿನ್ನೆಲೆಯಲ್ಲಿ ಪಕ್ಷಾತೀತವಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಜನರು ಬೆಂಬಲಿಸುತ್ತಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಉಪಸ್ಥಿತರಿದ್ದರು.




