ಪ್ರಗತಿವಾಹಿನಿ ಸುದ್ದಿ; ಚಿಕ್ಕೋಡಿ: ಇಂದಿನ ಕಲುಷಿತ ವಾತಾವರಣದಲ್ಲಿ ಮನುಷ್ಯನಿಗೆ ಶುದ್ದ ಕುಡಿಯುವ ನೀರಿನ ಅವಶ್ಯಕತೆಯನ್ನು ಗಮನದಲ್ಲಿರಿಸಿ ಗ್ರಾಮೀಣ ಪ್ರದೇಶದಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಯಕ್ಸಂಬಾದ ಜೊಲ್ಲೆ ಉದ್ಯೋಗ ಸಮೂಹದ ಸಹಯೋಗದಲ್ಲಿ ನಿರ್ಮಿಸಿಕೊಡಲಾಗಿದೆ ಎಂದು ಮುಜರಾಯಿ ಹಾಗೂ ವಕ್ಫ್ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ಅವರು ಹಿರೇಕೋಡಿ ಗ್ರಾಮದಲ್ಲಿ ಜೊಲ್ಲೆ ಉದ್ಯೋಗ ಸಮೂಹದ ಸಹಯೋಗದಲ್ಲಿ ಸುಮಾರು 6 ಲಕ್ಷ ರೂಗಳ ಅಂದಾಜಿನ ಶುದ್ದ ಕುಡಿಯುವ ನೀರಿನ ಘಟಕಕ್ಕೆ ಚಾಲನೆ ನೀಡಿ ಮಾತನಾಡಿ, ಆರೋಗ್ಯವಂತ ಸಮಾಜ ನಿರ್ಮಾಣದ ಅವಶ್ಯಕತೆಯ ದೃಷ್ಠಿಯಿಂದ ಪ್ರತಿಯೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಚ ಭಾರತ ಯೋಜನೆಯ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಪ್ರತಿಯೊಬ್ಬರು ಕೈಜೋಡಿಸಬೇಕೆಂದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ, ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅನೀತಾ ದೇವಡಕರ, ಭರತ ದೇವಡಕರ, ರೇವಯ್ಯ ಹಿರೇಮಠ, ಸುಭಾಷ್ ಚೌಗಲಾ,ಸುದರ್ಶನ ಚೌಗಲಾ,ಶಂಕರ ಮಾಯನ್ನವರ, ರಾಜಾರಾಮ ಬಡಿಗೇರ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹಿರೇಕೋಡಿ ಗ್ರಾಮದಲ್ಲಿ ಕೋವಿಡ್ ಸುರಕ್ಷತಾ ಕಿಟ್ ವಿತರಿಸಿದ ಸಂಸದ ಅಣ್ಣಾಸಾಹೇಬ ಜೊಲ್ಲೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ