ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:
ಕೇಂದ್ರ ಸರಕಾರ ಮಂಡಿಸಿದ ಬಜೆಟ್ ಐತಿಹಾಸಿಕ ಬಜೆಟ್ ಎಂದು ಶಾಸಕ ಅಭಯ ಪಾಟೀಲ ವ್ಯಾಖ್ಯಾನಿಸಿದ್ದಾರೆ.
ವಿಶೇಷವಾಗಿ ಸಂಪರ್ಕ ವ್ಯವಸ್ಥೆಗೆ ಮಹತ್ವ ಕೊಡುವ ದೃಷ್ಟಿಯಿಂದ ಸುಮಾರು 80 ಸಾವಿರ ಕೋಟಿ ರೂಪಾಯಿಗಳ ಅನುದಾನದಲ್ಲಿ 1 ಲಕ್ಷ ಕಿ. ಮೀ. ರಸ್ತೆಯನ್ನು ಅಭಿವೃದ್ಧಿ ಪಡಿಸುವುದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 10 ಸಾವಿರ ಕೃಷಿ ಸಂಘಗಳ ನಿರ್ಮಾಣ, ಮಧ್ಯಮ ವರ್ಗದ ಜನರಿಗೆ ಮನೆಗಳ ನಿರ್ಮಾಣಕ್ಕಾಗಿ ಗೃಹ ಸಾಲ ಸರಳಿಕರಣ, ಅಸಂಘಟಿತ ಕಾರ್ಮಿಕರಿಗೆ ಪಿಂಚಣಿ ಯೋಜನೆ ಹಾಗೂ ಹೆಚ್ಚಿನ ಪ್ರಮಾಣದಲ್ಲಿ ಉದ್ಯೋಗ ಸೃಷ್ಟಿಗೆ ಅವಕಾಶ… ಹೀಗೆ ಎಲ್ಲ ಸ್ಥರದ ಜನರ ಆಶೋತ್ತರಗಳಿಗೆ ಅನುಗುಣವಾಗಿ ಜನರ ಹಿತವನ್ನು ಕಾಪಾಡುವ ಬಜೆಟ್ ಇದಾಗಿದೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ