CrimeKannada NewsKarnataka News

*ಹಿಟ್ ಆ್ಯಂಡ್ ರನ್: ಮೂರು ಯುವಕರ ಪ್ರಾಣ ತೆಗೆದ ಲಾರಿ ಚಾಲಕ*

ಪ್ರಗತಿವಾಹಿನಿ ಸುದ್ದಿ: ಬೈಕ್​​ ಮತ್ತು ಟ್ರಕ್​ ನಡುವೆ ಡಿಕ್ಕಿಯಾಗಿ ಬೈಕ್ ಮೇಲೆ ಇದ್ದ ಮೂವರು ಯುವಕರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.

ರಾಯಚೂರು ನಗರದ ಬಸವೇಶ್ವರ ವೃತ್ತದಲ್ಲಿ ಈ ಅಪಘಾತ ನಡೆದಿದ್ದು, ಮೊಹಮ್ಮದ್​​ ಅಲಿ(24), ನೂರ್ ಮೊಹಮ್ಮದ್(19) ಮತ್ತಯ ಫಯಾಜ್(26) ಮೃತ ದುರ್ದೈವಿಗಳಾಗಿದ್ದಾರೆ. 

ಮೃತ ಮೂವರೂ ರಾಯಚೂರುನಗರದ ಸುಖಾಣಿ ಕಾಲೋನಿಯ ನಿವಾಸಿಗಳು ಎಂಬುದು ತಿಳಿದುಬಂದಿದೆ. ಬಸವೇಶ್ವರ ವೃತ್ತದಿಂದ ಚಂದ್ರಮೌಳೇಶ್ವರ ವೃತ್ತದ ಕಡೆ ತೆರಳುತ್ತಿದ್ದ ಬೈಕ್​​ಗೆ ಹೈದರಾಬಾದ್​​​​ ಮಾರ್ಗದಿಂದ ಮಂತ್ರಾಲಯದ ಕಡೆ ಹೊರಟಿದ್ದ ಟ್ರಕ್ ಡಿಕ್ಕಿಯಾಗಿದೆ. 

ಅಪಘಾತದ ತೀವ್ರತೆಗೆ ಬೈಕ್​​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಅಪಘಾತದ ಬಳಿಕ ಟ್ರಕ್ ಸಮೇತ ಚಾಲಕ ಪರಾರಿಯಾಗಿದ್ದು, ಸ್ಥಳಕ್ಕೆ ರಾಯಚೂರು ಟ್ರಾಫಿಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Home add -Advt

https://pragativahini.com/the-role-of-ambedkars-principles-in-shaping-the-public-life-of-the-country-is-immense-prof-rajiv

Related Articles

Back to top button