Kannada NewsKarnataka News

*ಹಿಟ್ ಆ್ಯಂಡ್ ರನ್: ಇಬ್ಬರು ಮಹಿಳಾ ಕಾರ್ಮಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ನೈಸ್ ರಸ್ತೆ ಬದಿ ಹುಲ್ಲು ತೆಗೆಯುತ್ತಿದ್ದ ಮಹಿಳಾ ಕಾರ್ಮಿಕರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿರೋ ಘಟನೆ ವರದಿಯಾಗಿದೆ. 

ಬೆಂಗಳೂರು ನಗರದ ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಎಂಟ್ರಿ ಪಾಯಿಂಟ್ ಬಳಿ ಶುಕ್ರವಾರ ಸಂಜೆ ಈ ಘಟನೆ ಸಂಭವಿಸಿದೆ. ಮೃತರಿಬ್ಬರು ಯಾದಗಿರಿ ಮೂಲದವರಾಗಿದ್ದಾರೆ. 

ಮೃತರನ್ನು ರಂಗಮ್ಮ (45) ಹಾಗೂ ಚೌಡಮ್ಮ (55) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಇವರು ನೈಸ್ ರಸ್ತೆ ಬದಿಯಲ್ಲಿ ಹುಲ್ಲು ತೆರವು ಕಾರ್ಯದಲ್ಲಿ ತೊಡಗಿದ್ದರು. ಸದ್ಯ ಕೆಂಗೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ.

ಮೃತದೇಹಗಳನ್ನು ರಾಜರಾಜೇಶ್ವರಿ ಮೆಡಿಕಲ್ ಕಾಲೇಜಿಗೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ದಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವವಾಗಿದೆ. ಟೋಲ್ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಪ್ರಾಣ ಹೋಗಿದ್ದು, ಕೂಲಿ ಕೆಲಸಕ್ಕೆ ಬಂದಿದ್ದ ಇಬ್ಬರು ಅಸಹಜ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. 

Home add -Advt

ಕ್ಷಣಮಾತ್ರದಲ್ಲಿ ಸವಾರ ಎಸ್ಕೆಪ್ ಆಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಕೆಂಗೇರಿ ಸಂಚಾರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button