Latest

*ಭೀಕರ ರಸ್ತೆ ಅಪಘಾತ: ASI ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಡಿಆರ್ ಎ ಎಸ್ ಐ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಇಟಗಟ್ಟಿ ಬೈಪಾಸ್ ಬಳಿ ನಡೆದಿದೆ.

ಎಲ್ಲಪ್ಪ ಕುಂಬಾರ್ ಮೃತ ಡಿಆರ್ ಎ ಎಸ್ ಐ. ಹುಬ್ಬಳ್ಳಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಹೋಗಿದೆ. ಎಲ್ಲಪ್ಪ ಅವರ ತಲೆಗೆ ಗಭೀರವಾಗಿ ಗಾಯಗಳಾಗಿದ್ದು, ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿಟ್ & ರನ್ ಪ್ರಕರಣ ದಾಖಲಾಗಿದೆ.

Related Articles

Back to top button