ಪ್ರಗತಿವಾಹಿನಿ ಸುದ್ದಿ : ಆರ್ ಆರ್ ನಗರ ಶಾಸಕ ಮುನಿರತ್ನಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಮುನಿರತ್ನ ವಿರುದ್ಧ ಕೇಳಿಬಂದಿದ್ದ ಅತ್ಯಾಚಾರ ಆರೋಪ ತನಿಖೆಯಲ್ಲಿ ರುಜುವಾತಾಗಿದ್ದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ SIT ತಂಡ ಚಾರ್ಜ್ ಶೀಟ್ ಸಲ್ಲಿಸಿದೆ.
ತಮ್ಮ ವಿರೋಧಿಗಳನ್ನು ಎಚ್ ಐವಿ ಏಡ್ಸ್ ಪೀಡಿತರ ಮೂಲಕ ಹನಿಟ್ರಾಪ್ ಬಲೆಗೆ ಬೀಳಿಸಿ ಏಡ್ಸ್ ಹರಡುವಿಕೆಗೆ ಶಾಸಕರು ದುಷ್ಕೃತ್ಯ ಎಸಗಿದ್ದರು ಎಂಬ ಗಂಭೀರ ಸ್ವರೂಪದ ಆರೋಪ ಕೂಡ ಸಾಬೀತಾಗಿದೆ. ಐಪಿಸಿ 270ರ ಅಡಿ ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೆ ಶಾಸಕರ ಕೃತ್ಯಕ್ಕೆ ನೆರವು ನೀಡಿದ ಆರೋಪ ಹೊತ್ತಿದ್ದ ಅವರ ಸಹಚರರಾದ ಆರ್.ಸುಧಾಕರ್, ಪಿ.ಶ್ರೀನಿವಾಸ್ ಹಾಗೂ ಇನ್ಸ್‌ಪೆಕ್ಟರ್ ಬಿ.ಐಯ್ಯಣ್ಣರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.
ಸೆಪ್ಟೆಂಬರ್‌ನಲ್ಲಿ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ಹಾಗೂ ಸಹಚರರ ವಿರುದ್ಧ ಅತ್ಯಾಚಾರ ಆರೋಪ ಮಾಡಿ ಆರ್.ಆರ್.ನಗರ ಕ್ಷೇತ್ರದ ಬಿಜೆಪಿ ಕಾರ್ಯಕರ್ತೆ ದೂರು ನೀಡಿದ್ದರು. ಪ್ರಕರಣದ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿತ್ತು. ಈ ಬಗ್ಗೆ ಸುದೀರ್ಘ ತನಿಖೆ ನಡೆಸಿದ ಎಸ್‌ಐಟಿ, ಶಾಸಕರ ವಿರುದ್ದ ಆತ್ಯಾಚಾರ ಹಾಗೂ ಅವರ ಸಹಚರರ ಮೇಲೆ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಆರೋಪ ಪಟ್ಟಿ ಸಲ್ಲಿಸಿದೆ.
ಜನಪ್ರತಿನಿಧಿ ಗಳ ವಿಶೇಷ ನ್ಯಾಯಾಲಯಕ್ಕೆ ಮುನಿರತ್ನ ಹಾಗೂ ಮೂವರು ಸಹಚರರ ವಿರುದ್ಧ 2481 ಪುಟಗಳ ಆರೋಪ ಪಟ್ಟಿಯನ್ನು ಎಸ್ ಐಟಿ ಸಲ್ಲಿಸಿದೆ. ಇದರಲ್ಲಿ 146 ಸಾಕ್ಷಿಗಳ ಹೇಳಿಕೆ, 350 ದಾಖಲೆ ಗಳು ಸಲ್ಲಿಕೆಯಾಗಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ