ಪ್ರಗತಿವಾಹಿನಿ ಸುದ್ದಿ: ದೇಶಾದ್ಯಂತ ಹಾಗೂ ರಾಜ್ಯದಲ್ಲಿ ಆತಂಕ ಸೃಷ್ಟಿಸಿರುವ HMPV ವೈರಸ್ ಆತಂಕದ ಬಗ್ಗೆ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡೀದೆ. HMPV ಟೆಸ್ಟ್ ಮಾಡಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.
ರಾಜ್ಯದಲ್ಲಿ HMPV ಟೆಸ್ಟ್ ಕಡ್ಡಾಯವಲ್ಲ ಎಂದು ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದೆ. HMPV ಟೆಸ್ಟ್ ಮಾಡಿಸಿಕೊಳ್ಳಿ ಎನ್ನುವವರ ಮೇಲೆ ಹದ್ದಿನ ಕಣ್ಣಿಡಲು ಇಲಾಖೆ ಮುಂದಾಗಿದೆ.
ಜ್ವರ, ಕೆಮ್ಮು,ನೆಗಡಿ ಎಂದು ಆಸ್ಪತ್ರೆಗೆ ಹೋದವರಿಗೆ HMPV ಟೆಸ್ಟ್ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಈ ಟೆಸ್ಟ್ ಗೆ 10-12 ಸಾವಿರ ರೂಪಾಯಿ ಇದೆ. HMPV ಅಪಾಯಕಾರಿ ವೈರಸ್ ಅಲ್ಲ. ಚಳಿಗಾಲದ ಸಂದರ್ಭದಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಸಾಮಾನ್ಯ ಹೀಗಾಗಿ HMPV ಟೆಸ್ಟ್ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಅಭಿಪ್ರಾಯಪಟ್ಟಿದ್ದು, ಈ ಬಗ್ಗೆ ಸಂಜೆಯೊಳಗೆ ಅಧಿಕೃತ ಪ್ರಕಟಣೆ ಹೊರಡಿಸುವ ಸಾಧ್ಯತೆ ಇದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ