Belagavi NewsBelgaum NewsEducationKannada NewsKarnataka News
*ನಾಳೆಯೂ ಬೆಳಗಾವಿಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ವ್ಯಾಪಕ ಮಳೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಬೆಳಗಾವಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ.
ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಬೆಳಗಾವಿ ತಾಲೂಕು, ಕಿತ್ತೂರು, ಬೈಲಹೊಂಗಲ, ಸವದತ್ತಿ, ಖಾನಾಪುರ, ರಾಮದುರ್ಗ, ಚಿಕ್ಕೋಡಿ, ಹುಕ್ಕೇರಿ ಮತ್ತು ಚಿಕ್ಕೋಡಿ ತಾಲ್ಲೂಕುಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ನಾಳೆ ಮಂಗಳವಾರ ರಜೆ ಇರಲಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಆದೇಶಿಸಿದ್ದಾರೆ.
ಬೆಳಗಾವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ ಹಾಗೂ ಸವದತ್ತಿಯಲ್ಲಿ ಶಾಲೆಗಳ ಜೊತೆಗೆ ಪದವಿಪೂರ್ವ ಕಾಲೇಜಿಗೂ ರಜೆ ಘೋಷಿಸಲಾಗಿದೆ.