
ಪ್ರಗತಿವಾಹಿನಿ ಸುದ್ದಿ : ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲಾ ಶಾಲೆ ಹಾಗೂ ಅಂಗನವಾಡಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ.
ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ಸೋಮವಾರ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ, ಮೌಖಿಕವಾಗಿ ಆದೇಶ ಹೊರಡಿಸಿದ್ದಾರೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು ಅಧಿಕೃತ ಆದೇಶವನ್ನು ಇನ್ನೇನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ