
ಪ್ರಗತಿವಾಹಿನಿ ಸುದ್ದಿ: ಬಿಡದೇ ಸುರಿಯುತ್ತಿರುವ ಮಳೆಯಿಂದ ಬೆಂಗಳೂರು ತತ್ತರಿಸಿದ್ದು, ಬೆಂಗಳೂರಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಆದೇಶಿಸಿದ್ದಾರೆ.
ಬುಧವಾರ (ಅಕ್ಟೋಬರ್ 16) ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಬೆಂಗಳೂರಿನಲ್ಲಿ ಜಡಿ ಮಳೆ ಸುರಿಯುತ್ತಿದ್ದು ಮುಂದಿನ 3 ದಿನಗಳ ಕಾಲ ಮಳೆ ಮುಂದುವರಿಯಲಿದೆ. ಈ ಹಿನ್ನೆಲೆಯಲ್ಲಿ ನಗರದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ