Belagavi NewsBelgaum NewsKannada NewsKarnataka NewsNational

*ಇಂದು ರಾಜ್ಯದ ಹಲವು ಕಡೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯದಲ್ಲಿ ಮಳೆರಾಯ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು ಜಿಲ್ಲೆಗಳಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಇಂದು ಹಲವು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ‌.

ಉತ್ತರ ಕನ್ನಡ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಇರುವ ಕಾರಣ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ (ಪಿಯು) ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ. 

Home add -Advt

ಇನ್ನು ಬೆಳಗಾವಿ ಜಿಲ್ಲೆಯ ಬೆಳಗಾವಿ ಮತ್ತು ಖಾನಾಪುರ ತಾಲೂಕುಗಳ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಅಂಗನವಾಡಿಯಿಂದ 12ನೇ ತರಗತಿಯವರೆಗಿನ ಎಲ್ಲಾ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ಘೋಷಿಸಿದ್ದಾರೆ.

ಇತ್ತ ಮಲೆನಾಡು ಭಾಗದಲ್ಲೂ ವರುಣನ ಅಬ್ಬರಕ್ಕೆ ಸಾರ್ವಜನಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಶಿವಮೊಗ್ಗ ಜಿಲ್ಲೆಯ ಸಾಗರ, ಹೊಸನಗರ ಹಾಗೂ ತೀರ್ಥಹಳ್ಳಿ ತಾಲೂಕುಗಳಲ್ಲಿ ಇಂದು ಶಾಲೆ ಮತ್ತು ಕಾಲೇಜುಗಳಿಗೆ ರಜೆ ನೀಡಲಾಗಿದೆ. 

ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ಮುನ್ನೆಚ್ಚರಿಕೆಯಾಗಿಶಾಲೆ, ಅಂಗನವಾಡಿ ಹಾಗೂ ಪಿಯು ಕಾಲೇಜುಗಳಿಗೆ ರಜೆ ಕಲ್ಪಿಸಲಾಗಿದೆ. 

ನದಿಗಳ ಹರಿವು ಹೆಚ್ಚಾಗಿರುವ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲೂ ಮಂಗಳವಾರ ರಜೆಯನ್ನು ಮುಂದುವರಿಸಲಾಗಿದೆ.

Related Articles

Back to top button