
ಪ್ರಗತಿವಾಹಿನಿ ಸುದ್ದಿ: ಭಾರಿ ಮಳೆಯ ಕಾರಣ ಅನಾಹುತ ಸಂಭವಿಸುವ ಭೀತಿ ಹಿನ್ನೆಲೆ ಆಗಸ್ಟ್ 30 ಇಂದು ಶನಿವಾರ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. 3 ಜಿಲ್ಲೆಯ ವಿವಿಧ ತಾಲೂಕಿನ ಶಾಲೆಗಳು ಮತ್ತು ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಭಾರಿ ಮಳೆಯಿಂದಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ ಕಾಲೇಜಿಗೆ ರಜೆ ಘೋಷಿಸಲಾಗಿದೆ.
ಮುಂದಿನ 48 ಗಂಟೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.