
ಪ್ರಗತಿವಾಹಿನಿ ಸುದ್ದಿ : ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಮುನ್ನೆಚ್ಚರಿಕ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಕೆಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪುತ್ತೂರು, ಬಂಟ್ವಾಳ, ಮಂಗಳೂರು, ಮೂಡುಬಿದಿರೆ, ಮೂಲ್ಕಿ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಸಂಬಂಧಿಸಿದ ತಾಲೂಕು ತಹಸೀಲ್ದಾರ್‌ಗಳು ಪ್ರಕಟಣೆ ಹೊರಡಿಸಿದ್ದಾರೆ.
ಇನ್ನು ಉಡುಪಿ ಜಿಲ್ಲೆಯಲ್ಲೂ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಇಂದು ಎಲ್ಲಾ ಅಂಗನವಾಡಿ, ಶಾಲೆಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಲಾಗಿದೆ. ಆದರೆ ಕಾಲೇಜುಗಳಿಗೆ ರಜೆ ಇಲ್ಲ. ಎಂದಿನಂತೆ ತರಗತಿ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.