ಪ್ರಗತಿವಾಹಿನಿ ಸುದ್ದಿ, ಕಾರವಾರ: ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಡಗೋಡ ಹಾಗೂ ಹಳಿಯಾಳ ತಾಲೂಕು ಹೊರತುಪಡಿಸಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 14.07.2024 ರ ಮಧ್ಯಾಹ್ನ 1:00 ಗಂಟೆಯಿಂದ ದಿನಾಂಕ: 16-07-2024 ರ ಬೆಳಿಗ್ಗೆ 08:30 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್)ನ್ನು ಉಲ್ಲೇಖ (1) ರನ್ವಯ ನೀಡಿರುತ್ತದೆ. ಜಿಲ್ಲೆಯ ಉಪ ನರ್ದೇಶಕರು ಶಾ.ಶಿ.ಇ ಕಾರವಾರ/ಶಿರಸಿ ಹಾಗೂ ತಹಶೀಲ್ದಾರರು ಹಳ್ಳಕೊಳ್ಳಗಳು ಭಾರಿ ಮಳೆಯಿಂದ ತುಂಬಿದ್ದು ಶಾಲಾ ಮಕ್ಕಳಿಗೆ ಶಾಲೆಗೆ ತೆರಳಲು ಅನಾನುಕೂಲವಾಗುವುದರ ಜೊತೆಗೆ ಅವಘಡಗಳು ಸಂಭವಿಸುವ ಸಾಧ್ಯತೆಯ ಬಗ್ಗೆ ವಿವರಿಸಿರುತ್ತಾರೆ.
ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ ಶಿರಸಿ ಸಿದ್ದಾಪೂರ,ಯಲ್ಲಾಪೂರ ದಾಂಡೇಲಿ ಹಾಗೂ ಜೋಯಿಡಾ ತಾಲೂಕುಗಳಲ್ಲಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34(ಎಮ್) ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ರವರಿಗೆ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪೂರ, ಯಲ್ಲಾಪೂರ,ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ (12ನೇಯ ತರಗತಿಯ ವರೆಗೂ) ದಿನಾಂಕ: 15-07-2024 ರಂದು ರಜೆ ಘೋಷಿಸುವ ಕುರಿತು ಈ ಕೆಳಗಿನಂತೆ ಆದೇಶ ಮಾಡಿದೆ.
ಆದೇಶ
ಈ ಮೇಲಿನ ಪ್ರಸ್ತಾವನೆಯಲ್ಲಿ ವಿವರಿಸಿದ ಕಾರಣಗಳಿಂದ ಮತ್ತು ವಿಪತ್ತು ನಿರ್ವಹಣಾ ಕಾಯ್ದೆ 2005 ರ ಕಲಂ 34 (ಎಮ್) ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪೂರ,ಯಲ್ಲಾಪೂರ, ದಾಂಡೇಲಿ ಹಾಗೂ ಜೋಯಿಡಾ ತಾಲ್ಲೂಕಿನಾದ್ಯಂತ, ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ(12ನೇಯ ತರಗತಿಯ ವರೇಗೂ )ಮುಂಜಾಗೃತ ಕ್ರಮವಾಗಿ ದಿನಾಂಕ: 15-07-2024 ರಂದು ರಜೆ ಘೋಷಿಸಿ ಆದೇಶಿಸಿದೆ.
ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ/ ಶಿರಸಿ, ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ