
ಪ್ರಗತಿವಾಹಿನಿ ಸುದ್ದಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಗೆ ಸುರಿಯುತ್ತಿದ್ದು ಅಲ್ಲಲ್ಲಿ ಗುಡ್ಡ ಕುಸಿತ ಘಟನೆಗಳು ನಡೆದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಇಂದು ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಮುಂಜಾಗ್ರತಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆದಂತೆ, ಎಲ್ಲ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶ ಹೊರಡಿಸಿದ್ದಾರೆ.