
ಪ್ರಗತಿವಾಹಿನಿ ಸುದ್ದಿ: ಕರಾವಳಿ ಜಿಲ್ಲೆಗಳಿಗೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಬೀದರ್ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಅಂಗನವಾಡಿಯಿಂದ ಪಿಯು ಕಾಲೇಜುವರೆಗೆ ಜಿಲ್ಲಾಡಳಿತ ರಜೆ ನೀಡಿದೆ. ಇನ್ನು ಬೀದರ್ ಜಿಲ್ಲೆಯಲ್ಲಿ ನಿರಂತರವಾಗಿ ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಘೋಷಿಸಿದ್ದಾರೆ.
ಶಿವಮೊಗ್ಗ ಚಿಕ್ಕಮಗಳೂರು, ಕೊಡಗು, ಕಲಬುರಗಿ, ಯಾದಗಿರಿ, ಉತ್ತರ ಕನ್ನಡ, ಗದಗ ಬೆಂಗಳೂರು ಸೇರಿ ಹಲವೆಡೆ ಆಗಸ್ಟ್ 30ಕ್ಕೆ ಭಾರೀ ಮಳೆಯಾಗಲಿದೆ.