Kannada NewsKarnataka NewsLatest

ಬೆಳಗಾವಿ ಹಾಗೂ ಖಾನಾಪುರ ತಾಲೂಕಿನ ಶಾಲೆಗಳಿಗೆ 2 ದಿನ ರಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರ, ಬೆಳಗಾವಿ ತಾಲ್ಲೂಕು ಮತ್ತು ಖಾನಾಪುರ ತಾಲ್ಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು ಶುಕ್ರವಾರ(ಜು.15) ಮತ್ತು ನಾಳೆ ಶನಿವಾರ (ಜು.16) ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.

Home add -Advt

 

ಪ್ರಗತಿವಾಹಿನಿ ಜೊತೆ ಗುರುವಾರ ಸಂಜೆ ಮಾತನಾಡಿದ್ದ ಜಿಲ್ಲಾಧಿಕಾರಿ ನಿತೇಶ ಪಾಟೀಲ, ಪರಿಸ್ಥಿತಿ ನೋಡಿ ರಜೆ ಕೊಡುವ ನಿರ್ಧಾರ ತೆಗೆದುಕೊಳ್ಳಲು ಡಿಡಿಪಿಐ ಹಾಗೂ ಬಿಇಒಗಳಿಗೆ ನೀಡಲಾಗಿದೆ. ಆದರೆ ಯಾರಿಂದಲೂ ಈ ಕುರಿತು ಕೋರಿಕೆ ಬಂದಿಲ್ಲ ಎಂದಿದ್ದರು. ನಂತರ ಖಾನಾಪುರ ತಾಲೂಕಿನ 11 ಕ್ಲಸ್ಟರ್ ಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು.

ಆದರೆ ಶುಕ್ರವಾರ ಬೆಳಗ್ಗೆ ಜಿಲ್ಲಾಧಿಕಾರಿಗಳು ಬೆಳಗಾವಿ ಮತ್ತು ಖಾನಾಪುರ ತಾಲೂಕಿನ ಎಲ್ಲ ಶಾಲೆ ಮತ್ತು ಪ್ರೌಢ ಶಾಲೆಗಳಿಗೆ ಶುಕ್ರವಾರ ಮತ್ತು ಶನಿವಾರ ರಜೆ ನೀಡುವ ನಿರ್ಧಾರ ಪ್ರಕಟಿಸಿದ್ದಾರೆ.

ಕಾಳಿ, ಹಿಡಕಲ್ ಡ್ಯಾಂ, ಆಲಮಟ್ಟಿ ಸೇರಿ ರಾಜ್ಯದ 9 ಕಡೆ ವಾಟರ್ ಏರೋಡ್ರೋಮ್ ನಿರ್ಮಾಣ

Related Articles

Back to top button