Kannada NewsKarnataka News

ನಾಳೆ ಶಾಲೆಗಳಿಗೆ ರಜೆ ಘೋಷಣೆ

ನಾಳೆ ಶಾಲೆಗಳಿಗೆ ರಜೆ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –

ಭಾರಿ ಪ್ರಮಾಣದಲ್ಲಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಭಾನುವಾರ, ಸೆ.8ರಂದು ಶಾಲೆಗಳಿಗೆ ರಜೆ ಘೋಷಿಸಿ ಬೆಳಗಾವಿ ಡಿಡಿಪಿಐ ಎ.ಬಿ.ಪುಂಡಲೀಕ್ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಈ ಆದೇಶ ಹೊರಡಿಸಿದ್ದಾಗಿ ಅವರು ತಿಳಿಸಿದ್ದಾರೆ.

ನಾಳೆ ನಡೆಯಬೇಕಿದ್ದ ಶಾಲೆಯ ಅವಧಿಯನ್ನು ಅಕ್ಟೋಬರ್ 5 ಮತ್ತು ಅಕ್ಟೋಬರ್ 26ರಂದು ಶನಿವಾರ ಪೂರ್ಣ ದಿನ ನಡೆಸುವ ಮೂಲಕ ಸರಿದೂಗಿಸಬೇಕೆಂದು ಸೂಚಿಸಲಾಗಿದೆ.

ಈ ಹಿಂದೆ ಭಾರಿ ಮಳೆಯ ಕಾರಣ ನೀಡಲಾಗಿದ್ದ ರಜೆಯನ್ನು ಸರಿದೂಗಿಸುವ ಸಲುವಾಗಿ ಭಾನುವಾರ ಶಾಲೆ ನಡೆಸಲು ಆದೇಶಿಸಲಾಗಿತ್ತು. ಆದರೆ ಈಗ ಪುನಃ ಮಳೆ ಬೀಳುತ್ತಿರುವುದರಿಂದ ಭಾನುವಾರ ಶಾಲೆಗೆ ರಜೆ ನೀಡಲಾಗಿದೆ.

ಇದನ್ನೂ ಓದಿ – ನಾಳೆಯಿಂದಲೇ ಶನಿವಾರ, ಭಾನುವಾರ ಪೂರ್ಣ ದಿನ ಶಾಲೆ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button