ನಾಳೆ 4 ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –
ಬೆಳಗಾವಿ ಜಿಲ್ಲೆಯ ಹಲವೆಡೆ ಕಳೆದ 4 ದಿನದಿಂದ ಸತತವಾಗಿ ಮಳೆ ಸುರಿಯುತ್ತಿದೆ. ಇದರಿಂದಗಿ ಹಲವೆಡೆ ಶಾಲೆಗಳಿಗೆ ಸಂಪರ್ಕ ಕಡಿತಗೊಂಡಿದೆ. ಹಲವೆಡೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿವೆ.
ಕೆಲವೆಡೆ ಶಾಲಾ ಕೊಠಡಿಗಳು ಸೋರುತ್ತಿರುವುದರಿಂದ ಕಟ್ಟಡಗಳು ಶಿಥಿಲಗೊಂಡಿವೆ. ಹಾಗಾಗಿ ಕೊಠಡಿಗಳು ಕುಸಿಯುವ ಸಂಭವವಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 4 ತಾಲೂಕುಗಳ ಶಾಲೆಗಳಿಗೆ ಜುಲೈ 31 ಮತ್ತು ಆ.1ರಂದು ರಜೆ ನೀಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಸ್ತಾವನೆ ಸಲ್ಲಿಸಿದ್ದರು.
ಈ ಹಿನ್ನೆಲೆಯಲ್ಲಿ, ಪ್ರಸ್ತಾವನೆಯನ್ನು ಪರಿಶೀಲಿಸಿದ ಜಿಲ್ಲಾಧಿಕಾರಿ ಎಸ್.ಬಿ.ಬೊಮ್ಮನಳ್ಳಿ 4 ತಾಲೂಕುಗಳ ಶಾಲೆಗಳಿಗ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಬೆಳಗಾವಿ, ಖಾನಾಪುರ, ಬೈಲಹೊಂಗಲ ಹಾಗೂ ಕಿತ್ತೂರು ತಾಲೂಕುಗಳ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ಜುಲೈ 31ರಂದು (ಒಂದು ದಿನ ಮಾತ್ರ) ರಜೆ ಘೋಷಿಸಿದ್ದಾರೆ.
ಮುಂದೆ ಬರು ಭಾನುವಾರ ಶಾಲೆ ನಡೆಸಿ ಬೋಧನಾ ಕಲಿಕಾ ಅವಧಿಯನ್ನು ಸರಿದೂಗಿಸಬೇಕು ಎಂದು ಅವರು ಆದೇಶದಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ