Belagavi NewsBelgaum NewsKannada NewsKarnataka NewsLatestPolitics

*ಸದನದಲ್ಲಿ ಹೋಮ್ ಗಾರ್ಡ್ಸ್ ಪರವಾಗಿ ಧ್ವನಿ ಎತ್ತಿದ ಶಾಸಕಿ ಶಶಿಕಲಾ ಜೊಲ್ಲೆ*

ಗೃಹ ರಕ್ಷಕರ ಭತ್ಯೆ ಪರಿಷ್ಕರಣೆ ಭರವಸೆ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಗೃಹ ರಕ್ಷಕರಿಗೆ ಬೇರೆ ರಾಜ್ಯಗಳಲ್ಲಿ ನೀಡುತ್ತಿರುವ ಭತ್ಯೆಯನ್ನು ಅವಲೋಕಿಸಿ ಶೀಘ್ರವೇ ರಾಜ್ಯದಲ್ಲಿ ಅವರ ಕರ್ತವ್ಯ ಭತ್ಯೆ ಪರಿಷ್ಕರಣೆ ಮಾಡುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕಿ ಶಶಿಕಲಾ ಜಿಲ್ಲೆ ಅವರ ಪ್ರಶ್ನೆಗೆ ಉತ್ತರಿಸಿ,21,327 ಪುರುಷ ಹಾಗೂ 4,555 ಮಹಿಳೆ ಸೇರಿ ಒಟ್ಟು 25,882 ಗೃಹ ರಕ್ಷರು ರಾಜ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರಿಗೆ 750 ರೂ.ಬೇರೆ ಇಲಾಖೆಗಳಲ್ಲಿ 600 ರೂ. ಹಾಗೂ ಪಹರೆ ಕೆಲಸಕ್ಕೆ ಬೆಂಗಳೂರು ನಗರದಲ್ಲಿ 455 ರೂ. ಹಾಗೂ ಇತರೆ ಸ್ಥಳದಲ್ಲಿ 380 ರೂ. ಭತ್ಯೆ ನೀಡಲಾಗುತ್ತಿದೆ. ಈ ವ್ಯತ್ಯಾಸವನ್ನು ಸರಿಪಡಿಸಿ 750 ರೂ. ದಿನಭತ್ಯೆ ನೀಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮೊದಲು ಮಾತನಾಡಿದ ಶಶಿಕಲಾ ಜೊಲ್ಲೆ, ಗೃಹರಕ್ಷ ಕರಲ್ಲಿ ಯಾವುದೇ ತಾರತಮ್ಯವಿಲ್ಲದೇ ಕರ್ತವ್ಯಕ್ಕೆ ನಿಯೋಜಿಸಿ, ನಾನಾ ಆರೋಗ್ಯ ಭದ್ರತೆ, ಪ್ರಯಾಣ ಭತ್ಯೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button